ಉಡುಪಿ: ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಉಡುಪಿ, ಜ. 15. ವ್ಯಕ್ತಿಯೋರ್ವರ ಮೃತದೇಹವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಉಡುಪಿಯ ಬಡಗುಬೆಟ್ಟು ಎಂಬಲ್ಲಿ ನಡೆದಿದೆ.


ಮೃತ ವ್ಯಕ್ತಿಯನ್ನು ಸುರೇಶ್ ಶೆಟ್ಟಿ (52 ) ಎಂದು ಗುರುತಿಸಲಾಗಿದೆ. ಗುರುವಾರ ರಾತ್ರಿ ಬಡಗುಬೆಟ್ಟು ಪರಿಸರದಲ್ಲಿನ ಹಳೆ ಮನೆಯೊಂದರಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವುದರಿಂದ ವ್ಯಕ್ತಿಯು ನಾಲ್ಕು ದಿನಗಳ ಹಿಂದೆ ಆತ್ಮಹತ್ಯೆ ಮಾಡಿರಬಹುದು ಎಂದು ಹೇಳಲಾಗಿದೆ. ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಕಾಸರಗೋಡು: ಅಪಾರ್ಟ್‌ಮೆಂಟ್‌ನಲ್ಲಿ ಬಚ್ಚಿಟ್ಟ ಗಾಂಜಾ ವಶಕ್ಕೆ

error: Content is protected !!
Scroll to Top