ಪೈಚಾರು: ಎರಡು ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ➤ ಪ್ರಯಾಣಿಕರು ಅಪಾಯದಿಂದ ಪಾರು



(ನ್ಯೂಸ್ ಕಡಬ) newskadaba.com ಸುಳ್ಯ, ಜ.15. ಮಾರುತಿ ಹಾಗೂ ಆಲ್ಟೋ ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ಹೊಡೆದ ಘಟನೆ ಪೈಚಾರು ಶ್ರೀ ಶಕ್ತಿ ಆಟೋ ವರ್ಕ್ಸ್ ಮುಂಭಾಗದಲ್ಲಿ ನಡೆದಿದೆ.





ಪೈಚಾರು ಕಡೆಯಿಂದ ಬರುತ್ತಿದ್ದ ಮಾರುತಿ ಕಾರಿಮ ಚಾಲಕ ಬೆಳ್ಳಾರೆ ರಸ್ತೆ ಎಂದು ಶಾಂತಿನಗರ ರಸ್ತೆಯ ಕಡೆ ವಾಹನವನ್ನು ತಿರುಗಿಸಿದಾಗ ಎದುರಿನಿಂದ ಬರುತ್ತಿದ್ದ ಆಲ್ಟೋ ಕಾರಿಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಎರಡೂ ಕಾರಿನ ಮುಂಭಾಗ ಜಖಂಗೊಂಡಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಮಹಿಳೆಯರು ಮತ್ತು ಚಾಲಕ ಯಾವುದೇ ಪ್ರಾಣಾಪಾಯವಿಲ್ಲದೇ ಪಾರಾಗಿದ್ದಾರೆ. ಸ್ಥಳಕ್ಕೆ ಸುಳ್ಯ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.






error: Content is protected !!
Scroll to Top