ರಾಜ್ಯ ಸರಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 16. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲಾ ಸರಕಾರಿ ನೌಕರರ ಸಂಘ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟದ ಉದ್ಘಾಟನೆ ಫೆಬ್ರವರಿ 2 ರಂದು ಬೆಳಗ್ಗೆ 8 ಗಂಟೆಗೆ ಮಂಗಳಾ ಕ್ರೀಡಾಂಗಣದಲ್ಲಿ ನಡೆಯಲಿದೆ.


ಫೆಬ್ರವರಿ 3ರಂದು ಬೆಳಗ್ಗೆ 10 ಗಂಟೆಯಿಂದ ಸಾಂಸ್ಕತಿಕ ಸ್ಪರ್ಧೆಗಳು ನಗರದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ “ನಂದಿನಿ” ಸಭಾಂಗಣದಲ್ಲಿ ಜರುಗಲಿದೆ. ಸ್ಪರ್ಧೆಗಳಲ್ಲಿ ಭಾಗವಹಿಸುವವರು ತಮ್ಮ ಕಚೇರಿ ಮುಖ್ಯಸ್ಥರಿಂದ ಹುದ್ದೆ ಹಾಗೂ ವಯಸ್ಸಿನ ಬಗ್ಗೆ ದೃಢೀಕರಣ ಮತ್ತು ಕೆ.ಜಿ.ಐ.ಡಿ ಸಂಖ್ಯೆಯ ಸಹಿತ ಉದ್ಘಾಟನಾ ದಿನದಂದು ಬೆಳಗ್ಗೆ 9 ಗಂಟೆಗೆ ಹಾಜರಿದ್ದು, ರಿಜಿಸ್ಷ್ರೇಷನ್ ಕಡ್ಡಾಯವಾಗಿ ಮಾಡಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0824-2425444 ನ್ನು ಸಂಪರ್ಕಿಸಲು ಸಂಘದ ಜಿಲ್ಲಾಧ್ಯಕ್ಷ ಪಿ.ಕೆ. ಕೃಷ್ಣರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಮಂಗಳೂರು: ವಾಹನಗಳ ಪ್ರಖರ ಬೆಳಕಿನ ವಿರುದ್ಧ ಕಾರ್ಯಾಚರಣೆ   ➤ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್

error: Content is protected !!
Scroll to Top