(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ.16. ಇಲ್ಲಿನ ಮನೆಯೊಂದಕ್ಕೆ ಮುಂಬಾಗಿಲ ಬೀಗ ಮುರಿದು ಒಳನುಗ್ಗಿದ ಕಳ್ಳರು ಲಕ್ಷಾಂತರ ರೂ. ನಗದು ಕದ್ದೊಯ್ದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.

ಕಲ್ಲೇರಿ ಎಂಬಲ್ಲಿ ಅಯದಯಂಗಾರ್ ಬೇಕರಿ ನಡೆಸುತ್ತಿದ್ದ ಶರತ್ ಎಂಬವರ ಮನೆಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ನುಗ್ಗಿದ ಕಳ್ಳರು 180 ಗ್ರಾಂ. ತೂಕದ ಚಿನ್ನಾಭರಣ, ಹತ್ತು ಸಾವಿರಕ್ಕೂ ಮಿಕ್ಕ ನಗದು ಹಾಗೂ ದೇವರ ಕೋಣೆಯಲ್ಲಿದ್ದ ಬೆಳ್ಳಿ ಸಾಮಾಗ್ರಿಗಳನ್ನು ಕದ್ದೊಯ್ದಿದ್ದಾರೆ. ರಾತ್ರಿ ಅಂಗಡಿ ಮುಚ್ಚಿ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ಉಪ್ಪಿನಂಗಡಿ ಠಾಣೆಯಲ್ಲಿ ದೂರು ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ.









