ಅರಂತೋಡು: ಬಿಯರ್ ತುಂಬಿದ್ದ ಲಾರಿ ಪಲ್ಟಿ ➤ ಚಾಲಕ ಅಪಾಯದಿಂದ ಪಾರು



(ನ್ಯೂಸ್ ಕಡಬ) newskadaba.com ಅರಂತೋಡು, ಜ. 17. ಮೈಸೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಬಿಯರ್ ತುಂಬಿದ ಲಾರಿಯೊಂದು ಅರಂತೋಡು ಸಮೀಪ ಕೊಡಂಕೇರಿ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ರಾತ್ರಿ ನಡೆದಿದೆ.






ಘಟನೆಯಲ್ಲಿ ವಿದ್ಯುತ್ ಕಂಬವೊಂದು ಮುರಿದು ಬಿದ್ದಿದ್ದು ಚಾಲಕ ಮತ್ತು ಕ್ಲೀನರ್ ಅಪಾಯದಿಂದ ಪಾರಾಗಿದ್ದಾರೆ. ಸುಮಾರು ರೂ 45 ಲಕ್ಷ ಮೌಲ್ಯದ ಬಿಯರ್ ಇತ್ತೆಂದು ಹೇಳಲಾಗುತ್ತಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.






error: Content is protected !!
Scroll to Top