Breaking News ➤ ವಿವಾದಿತ ಗೋಹತ್ಯಾ ನಿಷೇಧ ನಾಳೆ (ಜ.18)ಯಿಂದ ಜಾರಿ…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 17. ವಿವಾದಿಯ ಗೋಹತ್ಯಾ ನಿಷೇಧ ಕಾನೂನು ಜನವರಿ 18 ರಿಂದ ರಾಜ್ಯದಲ್ಲಿ ಜಾರಿಯಾಗಲಿದೆ ಎಂದು ಪಶುಸಂಗೋಪನೆ ಹಜ್ ಮತ್ತು ವಕ್ಫ್ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.


ಗೋಹತ್ಯೆ ನಿಷೇಧದ ಹಿನ್ನೆಲೆಯಲ್ಲಿ ಗೋವುಗಳ ಸಂರಕ್ಷಣೆಗೆ ಬೇಕಾಗುವ ಗೋಶಾಲೆ ಹಾಗೂ ಇನ್ನಿತರ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡಿ ಹಂತ ಹಂತವಾಗಿ ಗೋಶಾಲೆಗಳ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ. ಗೋವುಗಳ ಅಕ್ರಮ ಸಾಗಾಟ ಮತ್ತು ವಧೆ ಆಗುತ್ತಿರುವುದು ಸಾರ್ವಜನಿಕರ ಗಮನಕ್ಕೆ ಬಂದರೆ ತಕ್ಷಣವೇ ಹತ್ತಿರದ ಪೊಲೀಸ್ ಠಾಣೆ, ಜಿಲ್ಲೆ ಅಥವಾ ತಾಲೂಕು ವ್ಯಾಪ್ತಿಯ ಪಶುಪಾಲನಾ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತರುವಂತೆ ಸಾರ್ವಜನಿಕರಿಗೆ ತಿಳಿಸಲಾಗಿದೆ.

Also Read  ಸರಕಾರಿ ಹಾಗೂ ಖಾಸಗಿ ಬಸ್ಸುಗಳಲ್ಲಿ ಡ್ರಗ್ಸ್ ಸರಬರಾಜು ➤ ಶ್ವಾನದಳದ ಮೂಲಕ ತಪಾಸಣೆ

error: Content is protected !!
Scroll to Top