(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.17. ಬಿಜೆಪಿ ಹಿರಿಯ ನಾಯಕ, ಕೇಂದ್ರ ಗೃಹ ಸಚಿವ ಸಚಿವ ಅಮಿತ್ ಶಾ ಅವರು ಎರಡು ದಿನಗಳ ರಾಜ್ಯ ಪ್ರವಾಸಕ್ಕಾಗಿ ಶನಿವಾರದಂದು ಬೆಂಗಳೂರಿಗೆ ಆಗಮಿಸಿದ್ದಾರೆ.
ಬೆಂಗಳೂರಿನ ಎಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುಲಾಬಿ ಹೂ ನೀಡುವ ಮೂಲಕ ಸ್ವಾಗತಿಸಿದರು. ಬಳಿಕ ಅವರು ಶಿವಮೊಗ್ಗದ ಭದ್ರಾವತಿ ತಾಲೂಕಿನ ಬುಳ್ಳಾಪುರದ ಕ್ಷಿಪ್ರ ಕಾರ್ಯಾಚರಣೆ ಪಡೆಯ ತರಬೇತಿ ಕೇಂದ್ರಕ್ಕೆ ಭೇಟಿ ನೀಡಿ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಇಂದು ಬೆಳಗಾವಿಯಲ್ಲಿ ಬಹಿರಂಗ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇಂದು ಸಂಜೆ ಮತ್ತೆ ಬೆಂಗಳೂರಿಗೆ ಆಗಮಿಸಿ ವಿಧಾನಸೌಧದ ಮುಂಭಾಗ ಇ.ಆರ್.ಎಸ್.ಎಸ್ ವಾಹನಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.