ಬಂಟ್ವಾಳ: ಅಕ್ರಮ ಮದ್ಯ ಸಾಗಾಟ ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 17. ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ವೇಳೆ ದಾಳಿ ನಡೆಸಿದ ಪೊಲೀಸರು ಟೊಯೊಟಾ ಇಟಿಯೋಸ್ ಕಾರಿನಲ್ಲಿದ್ದ 50 ಲೀಟರ್ ಮದ್ಯವನ್ನು ವಶಕ್ಕೆ ಪಡೆದು ಆರೋಪಿಯನ್ನು ಬಂಧಿಸಿದ ಘಟನೆ ನಡೆದಿದೆ.

ಬಂಧಿತ ಆರೋಪಿಯನ್ನು ಬಂಟ್ವಾಳ ತಾಲೂಕಿನ ಮೊಡಂಕಾಪಿನ ಸಂದೀಪ್ ಎಂದು ಗುರುತಿಸಲಾಗಿದೆ. ಆರೋಪಿಯ ಬಂಧನದ ಬಳಿಕ ಪೊಲೀಸರು ಆರೋಪಿಗೆ ಸಂಬಂಧಿಸಿದ ಕಟ್ಟಡಕ್ಕೆ ದಾಳಿ ನಡೆಸಿದ್ದು, 107 ಲೀಟರ್ ಮದ್ಯ ಮತ್ತು 34 ಲೀಟರ್ ಬಿಯರ್ ಹಾಗೂ ಆತನಲ್ಲಿದ್ದ ಇಟಿಯೋಸ್ ಕಾರು ಮತ್ತು ಅಶೋಕ್ ಲೇಲ್ಯಾಂಡ್ ಟೆಂಪೋವನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

Also Read  ಹೆರಿಗೆಯ ವೇಳೆ ನವಜಾತ ಶಿಶುವಿನ ತಲೆಯನ್ನು ಕತ್ತರಿಸಿ ಗರ್ಭದಲ್ಲೇ ಬಿಟ್ಟ ಸಿಬ್ಬಂದಿ..!!

error: Content is protected !!
Scroll to Top