ಕೆಇಬಿ ನೌಕರನ ಗುಂಡಿಟ್ಟು ಹತ್ಯೆ ➤ ಸ್ಥಳದಲ್ಲೇ ಪಾರ್ಟಿ ಮಾಡಿದ ಹಂತಕರು

(ನ್ಯೂಸ್ ಕಡಬ) newskadaba.com ಹಾಸನ, ಜ. 17. ಕೆಇಬಿ ನೌಕರನನ್ನು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಹಾಸನದ ಹೂವಿನಹಳ್ಳಿ ಕಾವಲು ಬಳಿ ನಡೆದಿದೆ.


ಮೃತರನ್ನು ಸಂತೋಷ್(36) ಎಂದು ಗುರುತಿಸಲಾಗಿದೆ. ಇವರ ಮೃತದೇಹವು ಜಮೀನೊಂದರಲ್ಲಿ ಪತ್ತೆಯಾಗಿದ್ದು, ಈ ಸ್ಥಳದಲ್ಲಿ ಮದ್ಯದ ಬಾಟಲಿ ಹಾಗೂ ಊಟದ ಪ್ಯಾಕೆಟ್ ಗಳು ಪತ್ತೆಯಾಗಿದೆ. ಕೊಲೆಗೂ ಮೊದಲು ಹಂತಕರು ಈ ಪ್ರದೇಶದಲ್ಲಿ ಪಾರ್ಟಿ ಮಾಡಿರಬಹುದು ಅಥವಾ ಸಂತೋಷ್ ಜೊತೆಗೆ ಹಂತಕರು ಪಾರ್ಟಿ ನಡೆಸಿ ಆ ಬಳಿಕ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಸಂತೋಷ್ ಹತ್ಯೆಗೆ ನಿಖರ ಕಾರಣಗಳು ಇನ್ನೂ ತಿಳಿದು ಬಂದಿಲ್ಲ. ಹಾಸನ ಗ್ರಾಮಾಂತರ ಠಾಣಾ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Also Read  ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ➤ ದೂರು ಹಿಂತೆಗೆಯುವಂತೆ ವಿದೇಶದಿಂದ ಬೆದರಿಕೆ

error: Content is protected !!
Scroll to Top