ಮಂಗಳೂರು- ತಿರುವನಂತಪುರಂ ರೈಲಿನಲ್ಲಿ ಬೆಂಕಿ ಅವಘಡ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ.17. ಮಂಗಳೂರು – ತಿರುವನಂತಪುರ ಎಕ್ಸ್ ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಢ ಉಂಟಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.


ಘಟನೆಯು ಪಾರ್ಸೆಲ್ ವಿಭಾಗದಲ್ಲಾಗಿದ್ದು, ಹೊಗೆಯನ್ನು ಗಮನಿಸಿದ ಪ್ರಯಾಣಿಕರು ಚೈನ್ ಎಳೆದು ರೈಲನ್ನು ನಿಲ್ಲಿಸಿ ಭಾರೀ ಅನಾಹುತವನ್ನು ತಪ್ಪಿಸಿದ್ದಾರೆ.
ಬಳಿಕ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಬೆಂಕಿ ಹತ್ತಿಕೊಂಡ ಭಾಗವನ್ನು ಬೇರ್ಪಡಿಸಲು ಸಾಧ್ಯವಾದುದರಿಂದ ಇತರ ಕಡೆಗಳಿಗೆ ಬೆಂಕಿ ಹರಡದಂತೆ ತಡೆಗಟ್ಟಲಾಯಿತು.

Also Read  ಬೆಳ್ತಂಗಡಿ: ಒಂಟಿ ವೃದ್ಧೆಯನ್ನು ಕೊಲೆಮಾಡಿ ನಗ-ನಗದು ದರೋಡೆ ಪ್ರಕರಣ ➤ ಬಂಧಿತ ಆರೋಪಿ ಮೃತ್ಯು

error: Content is protected !!
Scroll to Top