ಮಂಗಳೂರು: ಲಾರಿ ಹಾಗೂ ಸಿಟಿ ಬಸ್ ನಡುವೆ ಢಿಕ್ಕಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 17. ಸಿಟಿ ಬಸ್ ಮತ್ತು ಲಾರಿ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬಸ್‌ ನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ಇಂದು ಬೆಳ್ಳಂಬೆಳಗ್ಗೆ ಕಂಕನಾಡಿ ಜಂಕ್ಷನ್ ನಲ್ಲಿ ನಡೆದಿದೆ.

15 ನಂಬರಿನ ಬಸ್ ಕಂಕನಾಡಿಯಿಂದ ಮಂಗಳಾದೇವಿ ಕಡೆಗೆ ಹೋಗುತ್ತಿದ್ದು, ಕಂಕನಾಡಿ ಜಂಕ್ಷನ್ ನಲ್ಲಿ ಎಡಕ್ಕೆ ತಿರುಗುವಾಗ ಪಂಪ್‌ವೆಲ್ ಕಡೆಗೆ ಚಲಿಸುತ್ತಿದ್ದ ಲಾರಿಯು ಡಿಕ್ಕಿ ಹೊಡೆದಿದೆ. ಅಪಘಾತದಿಂದಾಗಿ ಸ್ವಲ್ಪ ಸಮಯ ಸಂಚಾರ ಅಡಚಣೆ ಉಂಟಾಗಿತ್ತು. ಕದ್ರಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪ್ರಕರಣ ದಾಖಲಿಸಿದ್ದಾರೆ.

Scroll to Top