(ನ್ಯೂಸ್ ಕಡಬ) newskadaba.com ಮಂಗಳೂರು, ಜ. 18. ಸ್ನಾತಕೋತ್ತರ ಸಮಾಜಕಾರ್ಯ ವಿಭಾಗ, ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳ ಗಂಗೋತ್ರಿ ಮತ್ತು ಶಕ್ತಿ ವಿದ್ಯಾ ಸಂಸ್ಥೆ, ಶಕ್ತಿನಗರ ಇದರ ಜಂಟಿ ಆಶ್ರಯದಲ್ಲಿ ಶನಿವಾರದಂದು ಕೊರೋನಾ ಜಾಗೃತಿ ಕುರಿತಾದ ವಿಶೇಷ ಬೀದಿ ನಾಟಕ ವಿಶ್ವವಿದ್ಯಾನಿಲಯದ ಆವರಣದಲ್ಲಿ ನಡೆಯಿತು. ಗೌರವಾನ್ವಿತ ಕುಲಪತಿ ಪ್ರೊ. ಪಿ. ಯಸ್ ಯಡಪಡಿತ್ತಾಯರವರು ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ವಿದ್ಯುಕ್ತವಾಗಿ ನೆರವೇರಿಸಿ “ಆಧುನಿಕ ಯಾಂತ್ರೀಕೃತ ಜಗತ್ತಿನಲ್ಲಿ ಬದುಕಿನ ಮೌಲ್ಯವನ್ನು ನಮಗೆ ಕೊರೋನಾ ಕಲಿಸಿ ಕೊಟ್ಟಿದೆ” ಎಂದುಅಭಿಪ್ರಾಯ ಪಟ್ಟರು.
ವಿಶ್ವವಿದ್ಯಾನಿಲಯದ ಕುಲಸಚಿವರಾದ ಶ್ರೀ ಕೆ. ರಾಜು ಮೊಗವೀರರವರು ಮುಖ್ಯ ಅಥಿತಿಗಳಾಗಿ, ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ಅಧ್ಯಕ್ಷರಾದ ಡಾ. ಪೌಲ್ ಜಿ ಅಕ್ವಿನಾಸ್ ರವರು ಕಾರ್ಯಕ್ರಮದ ಅಧ್ಯಕ್ಷರಾಗಿ, ಸಮಾಜಕಾರ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಮೋಹನ್ ಎಸ್ ಸಿಂಘೆ ಕಾರ್ಯಕ್ರಮದ ಸಂಯೋಜಕರಾಗಿ ಉಪಸ್ಥಿತರಿದ್ದರು. ಡಾ. ಕೆ. ಸೀ ನಾಯಕ್ ಆಡಳಿತ ಅಧಿಕಾರಿ, ಶಕ್ತಿ ವಿದ್ಯಾ ಸಂಸ್ಥೆ, ಶ್ರೀ ರಮೇಶ್ ಕೆ, ಸಿಂಡಿಕೇಟ್ ಸದಸ್ಯರು, ಮಂಗಳೂರು ವಿಶ್ವವಿದ್ಯಾನಿಲಯ, ಶ್ರೀ ಪ್ರಖ್ಯಾತ್ ರೈ ಶಕ್ತಿ ವಿದ್ಯಾ ಸಂಸ್ಥೆಯ ಅಭಿವೃದ್ಧಿ ಅಧಿಕಾರಿ, ಶ್ರೀಮತಿ ವಿದ್ಯಾಕಾಮತ್ ಜಿ, ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲರು, ಶ್ರೀಮತಿ ನೀಮಾ ಸಕ್ಸೇನಾ ಶಕ್ತಿ ಪೂರ್ವ ಪ್ರಾಥಮಿಕ ಶಾಲೆಯ ಸಂಯೋಜನಾ ಅಧಿಕಾರಿ, ಶ್ರೀ ಸೀನ ಶೆಟ್ಟಿ, ಜನಶಿಕ್ಷಣ ಟ್ರಸ್ಟ್ ನ ಸ್ಥಾಪಕರು, ಶ್ರೀ ಅಚ್ಯುತಗಟ್ಟಿಕೊಣಾಜೆ ಗ್ರಾಮ ಪಂಚಾಯತ್ ನ ಸದಸ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಯಶಸ್ವಿನಿ ಬಟ್ಟಂಗಾಯ ಕಾರ್ಯಕ್ರಮವನ್ನು ನಿರೂಪಿಸಿದರು. ವಿಭಾಗದ ವಿದ್ಯಾರ್ಥಿಗಳು, ಅಥಿತಿ ಉಪನ್ಯಾಸಕರು, ಸಂಶೋಧನಾ ವಿದ್ಯಾರ್ಥಿಗಳು ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದರು. ಸಭಾ ಕಾರ್ಯಕ್ರಮದ ನಂತರ ಶಕ್ತಿ ಸಂಸ್ಥೆಯ ಸಿಬ್ಬಂದಿ ವರ್ಗದಿಂದ ಬೀದಿ ನಾಟಕ ನಡೆಯಿತು.