ಕಿನ್ನಿಗೋಳಿ: ನವಜಾತ ಶಿಶುವಿನ ಕೊಳೆತ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಮುಲ್ಕಿ, ಜ. 18. ಪ್ಲಾಸ್ಟಿಕ್ ಬ್ಯಾಗಿನಲ್ಲಿ ಸುತ್ತಿಟ್ಟು ರಸ್ತೆ ಬದಿಯ ಗುಂಡಿಯಲ್ಲಿ ಎಸೆಯಲ್ಪಟ್ಟ ಸ್ಥಿತಿಯಲ್ಲಿ ನವಜಾತ ಶಿಶುವಿನ ಕೊಳೆತ ಶವವೊಂದು ಕಿನ್ನಿಗೋಳಿ ಪರಿಸರದಲ್ಲಿ ಕಂಡುಬಂದಿದೆ.

ಮುಲ್ಕಿ – ಕಿನ್ನಿಗೋಳಿ ರಾಜ್ಯ ಹೆದ್ದಾರಿಯ ಕೆಂಚನಕೆರೆ ತಿರುವಿನ ರಸ್ತೆಯ ಬದಿಯಲ್ಲಿ ಪ್ಲಾಸ್ಟಿಕ್ ಬ್ಯಾಗೊಂದು ಪತ್ತೆಯಾಗಿದ್ದು, ಯಾರೋ ಪಾಪಿಗಳು ಮಗುವನ್ನು ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ. ಮೃತದೇಹವು ಸಂಪೂರ್ಣ ಕೊಳೆತು ಹೋಗಿದ್ದು ಗುರುತು ಸಿಗದಂತಾಗಿದೆ. ಕಿಲ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪೌರ ಕಾರ್ಮಿಕರು ಕಸ ಸಂಗ್ರಹಿಸುತ್ತಿದ್ದ ಸಂದರ್ಭ ರಸ್ತೆ ಬದಿ ಇಣುಕಿದಾಗ ಪ್ಲಾಸ್ಟಿಕ್ ನಲ್ಲಿ ಸುತ್ತಿಟ್ಟ ಕಳೇಬರ ಪತ್ತೆಯಾಗಿದೆ. ಪ್ಲಾಸ್ಟಿಕ್ ಬ್ಯಾಗ್ ಜೊತೆಗೆ ಕೈಗವಸು, ಸ್ಯಾನಿಟರಿ ಪ್ಯಾಡ್, ನೈಟಿ ಮತ್ತು ಬಟ್ಟೆಗಳು ಪತ್ತೆಯಾಗಿವೆ. ಸ್ಥಳಕ್ಕೆ ಮುಲ್ಕಿ ಪೊಲೀಸರು ಭೇಟಿ ನೀಡಿ ತನಿಖೆ ಮುಂದುವರಿಸಿದ್ದಾರೆ.

Also Read  ರಾಜ್ಯದಲ್ಲಿಂದು ಪ್ರಧಾನಿ ನರೇಂದ್ರ ಮೋದಿ ಮತಬೇಟೆ ➤ ವಿಜಯಸಂಕಲ್ಪ ಯಾತ್ರೆಗಳ ಮಹಾಸಂಗಮ ಸಮಾವೇಶ

error: Content is protected !!
Scroll to Top