2018ರ ಜನವರಿಯಿಂದ ದಕ್ಷಿಣ ಕನ್ನಡದಲ್ಲೂ 10 ಇಂದಿರಾ ಕ್ಯಾಂಟೀನ್ ► ಎಲ್ಲೆಲ್ಲಿ ಕ್ಯಾಂಟೀನ್ ಆರಂಭವಾಗುತ್ತದೆ ಗೊತ್ತೇ..?

(ನ್ಯೂಸ್ ಕಡಬ) newskadaba.com ಮಂಗಳೂರು, ಅ.16. 2018 ರ ಜನವರಿ 1 ರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10 ಇಂದಿರಾ ಕ್ಯಾಂಟೀನ್ ಗಳನ್ನು ತೆಗೆಯಲಾಗುವುದು ಎಂದು ರಾಜ್ಯ ಆಹಾರ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ.

ಅವರು ಸೋಮವಾರದಂದು ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ದ.ಕ.ಜಿಲ್ಲೆಯಲ್ಲಿ 10 ಹೊಸ ಕ್ಯಾಂಟೀನ್ ಗಳು ಆರಂಭವಾಗಲಿದ್ದು, ಅದರಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ 5, ಉಳ್ಳಾಲ ನಗರಸಭಾ ವ್ಯಾಪ್ತಿಯಲ್ಲಿ 1, ಬಂಟ್ವಾಳ, ಪುತ್ತೂರು, ಸುಳ್ಯ ಹಾಗೂ ಬೆಳ್ತಂಗಡಿಯಲ್ಲಿ ತಲಾ 1 ಕ್ಯಾಂಟೀನ್ ಗಳನ್ನು ಆರಂಭಿಸಲಾಗುವುದು ಎಂದರು. 45 ಸಾವಿರದಿಂದ 1 ಲಕ್ಷ ಜನಸಂಖ್ಯೆ ಇರುವ ಕಡೆಗಳಲ್ಲಿ ಪ್ರತೀದಿನ 500 ಜನರಿಗೆ ಮೂರು ಹೊತ್ತು ಊಟಗಳನ್ನು ವಿತರಿಸಲಾಗುವುದು ಎಂದರು‌.

error: Content is protected !!
Scroll to Top