ನಿಗಮದಿಂದ ಯುವಕರಿಗೆ ಬೈಕ್ ಖರೀದಿಗೆ ಸಾಲ -ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 18. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಪ್ರಸ್ತುತ ಸಾಲಿಗೆ “ಇ-ವಾಣಿಜ್ಯ ಸಂಸ್ಥೆಗಳು ಮನೆ ಬಾಗಿಲಿಗೆ ತಮ್ಮ ಉತ್ಪನ್ನಗಳನ್ನು ತಲುಪಿಸುವ ಹಿಂದುಳಿದ ವರ್ಗಗಳಿಗೆ ಸೇರಿದ ಪ್ರವರ್ಗ-1, ಪ್ರವರ್ಗ 2ಎ, 3ಎ ಮತ್ತು 3ಬಿಗೆ ಸೇರಿದ  (ವಿಶ್ವಕರ್ಮ, ಉಪ್ಪಾರ, ಅಂಬಿಗ, ಮಡಿವಾಳ, ಸವಿತಾ, ಅಲೆಮಾರಿ/ಅರೆ ಅಲೆಮಾರಿ ಜನಾಂಗದವರು ಹಾಗೂ ಮತೀಯ ಅಲ್ಪಸಂಖ್ಯಾತರನ್ನು ಹೊರತು ಪಡಿಸಿ) ಯುವಕರಿಗೆ ಬೈಕ್ ಕೊಂಡುಕೊಳ್ಳಲು ನಿಗಮದಿಂದ ರೂ. 25,000/- ಗಳ ಸಹಾಯಧನ ಹಾಗೂ ಉಳಿಕೆ ಮೊತ್ತ ಬ್ಯಾಂಕ್ ಅಥವಾ ಆರ್ಥಿಕ ಸಂಸ್ಥೆಗಳ ಮೂಲಕ ಸಾಲ ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

Also Read  ಕಾರ್ಯಸಿದ್ದಿ ಆಂಜನೇಯ ನೆನೆಯುತ್ತ ದಿನ ಭವಿಷ್ಯ ನೋಡಿ

ಹಿಂದುಳಿದ ವರ್ಗದ ಫಲಾಫೇಕ್ಷಿಗಳು, ಅವರು ವಾಸಿಸುತ್ತಿರುವ ಆಯಾ ಜಿಲ್ಲೆಯ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯಲ್ಲಿ ಅಥವಾ ನಿಗಮದ ವೆಬ್‍ಸೈಟ್ www.dbcdc.karnataka.gov.in ನಿಂದ ಅರ್ಜಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ/ದಾಖಲಾತಿಗಳೊಂದಿಗೆ ಆನ್‍ಲೈನ್ ಅಥವಾ ಆಫ್ ಲೈನ್ ಮೂಲಕ  ಜನವರಿ 23 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಚೇರಿ, ಡಿ.ದೇವರಾಜ ಅರಸು  ಭವನ, ರೇಡಿಯೋ ಪಾರ್ಕ್ ಬಳಿ, ಉರ್ವಸ್ಟೋರ್, ಮಂಗಳೂರು  ಕಚೇರಿಯನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!
Scroll to Top