ಆರೋಪ ಸಾಬೀತದ ನಂತರ ಪುಟ್ಟಸ್ವಾಮಿ ಆತ್ಮಹತ್ಯೆ ಮಾಡಿಕೊಳ್ಳಲಿ ► ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಮೈಸೂರು,ಅ.16. ಬಿಜೆಪಿ ಮುಖಂಡ ಬಿ.ಜೆ.ಪುಟ್ಟಸ್ವಾಮಿಯವರು ನನ್ನ ಮೇಲೆ ಮಾಡಿರುವ ಸುಳ್ಳು ಆರೋಪವನ್ನು ಸಾಬೀತು ಪಡಿಸಿದ ನಂತರ ಆತ್ಮಹತ್ಯೆ ಮಾಡಿಕೊಳ್ಳಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ನಗರದಲ್ಲಿನ ತನ್ನ ನಿವಾಸದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ವಿರುದ್ಧದ ಆರೋಪ ಸುಳ್ಳಾದರೇ ವಿಧಾನಸೌಧ ಎದುರು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಹೇಳಿಕೆ ನೀಡಿದ ವಿಧಾನ ಪರಿಷತ್ ಸದಸ್ಯ ಬಿ.ಜೆ ಪುಟ್ಟಸ್ವಾಮಿ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ಮೊದಲು ಸುಳ್ಳು ಆರೋಪವನ್ನು ಸಾಬೀತು ಮಾಡಲಿ, ಆಮೇಲೆ ಆತ್ಮಹತ್ಯೆಗೆ ಯತ್ನಿಸಲಿ. ಯಾರೇ ಆದರೂ ಆತ್ಮಹತ್ಯೆ ಮಾಡಿಕೊಳ್ಳುವುದು ಬೇಡ. ಪುಟ್ಟಸ್ವಾಮಿ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದರು.

error: Content is protected !!
Scroll to Top