ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ರೌಡಿಶೀಟರ್…! ➤ ಫೈರಿಂಗ್ ಮಾಡುವ ಮೂಲಕ ಅರೆಸ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 19. ರೌಡಿಶೀಟರ್ ಕಾಲಿಗೆ ಫೈರಿಂಗ್ ಮಾಡುವ ಮೂಲಕ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಯನ್ನು ವಿಜಯ್ ಕುಮಾರ್ ಅಲಿಯಾಸ್ ಗೊಣ್ಣೆ ವಿಜಯ್ ಎಂದು ಗುರುತಿಸಲಾಗಿದೆ. ಈತ ರೌಡಿಶೀಟರ್​ ಆಗಿದ್ದು, 18 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ. ಈತ ಇರುವ ಸ್ಥಳದ ಖಚಿತ ಮಾಹಿತಿ ಮೇರೆಗೆ ಈತನ ಬಂಧನಕ್ಕೆ ಪೊಲೀಸರು ವೀರಭದ್ರ ನಗರಕ್ಕೆ ತೆರಳಿದ್ದು, ಈ ವೇಳೆ ಆತ ಪೊಲೀಸ್ ಕಾನ್ ಸ್ಟೇಬಲ್ ಓರ್ವ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ಹಿನ್ನೆಲೆ ಪೊಲೀಸರು ಎಡಗಾಲಿಗೆ ಫೈರಿಂಗ್​ ಮಾಡಿ ಆತನನ್ನು ಬಂಧಿಸಿದ್ದಾರೆ.

Also Read  ಪಿಕಪ್ ವಾಹನ ಪಲ್ಟಿ ➤ ಚಾಲಕ ಸ್ಥಳದಲ್ಲೇ ಮೃತ್ಯು.!

error: Content is protected !!
Scroll to Top