ಮಂಗಳೂರು: ಪೊಲೀಸ್ ಸಿಬ್ಬಂದಿಯ ಕೊಲೆ ಯತ್ನ ಪ್ರಕರಣ ➤ 8 ಮಂದಿ ಅರೆಸ್ಟ್

(ನ್ಯೂಸ್ ಕಡಬ) ಮಂಗಳೂರು, .19. ಕಳೆದ ಡಿಸೆಂಬರ್‌ 16 ರಂದು ಕರ್ತವ್ಯ ನಿರತ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಓರ್ವರಿಗೆ ಹಾಡುಹಗಲೇ  ತಲವಾರು ದಾಳಿ ನಡೆಸಿ ಕೊಲೆಗೆ ಯತ್ನಿಸಿದ ಘಟನೆಯು ಮಂಗಳೂರು ಗೋಲಿಬಾರ್‌ ಗೆ ರಿವೇಂಜ್‌ ಎಂಬ ಮಾಹಿತಿಯ ಪ್ರಕಾರ 8 ಮಂದಿಯನ್ನು ಬಂಧಿಸಲಾಗಿದೆ.

ಬಂಧಿತ ಆರೋಪಿಗಳನ್ನು ಬಂಟ್ವಾಳ ನಿವಾಸಿ ಮಹಮ್ಮದ್ ನವಾಝ್ (30),  ಕುದ್ರೋಳಿ ನಿವಾಸಿ ಅನೀಶ್ ಅಶ್ರಫ್ (22), ಕುದ್ರೋಳಿ ನಿವಾಸಿ ಅಬ್ದುಲ್ ಖಾದರ್ ಫಹಾದ್ (23), ಬಜಪೆ ನಿವಾಸಿ ಶೇಖ್ ಮಹಮ್ಮದ್ ಹ್ಯಾರಿಸ್ ಯಾನಿ ಜಿಗ್ರಿ (31),  ಕುದ್ರೋಳಿ ನಿವಾಸಿ ರಾಹಿಲ್ ಯಾನೆ ಚೋಟು ರಾಹಿಲ್ (18), ತಣ್ಣೀರು ಬಾವಿ ನಿವಾಸಿ ಮಹಮ್ಮದ್ ಖಾಯೀಸ್ (24) ಎಂದು ಗುರುತಿಸಲಾಗಿದೆ. ಇಲ್ಲಿನ ಬಂದರು ಠಾಣಾ ಪೊಲೀಸ್ ಹೆಡ್ ಕಾನ್ಸ್‌ ಟೇಬಲ್ ಗಣೇಶ್ ಕಾಮತ್ ಹಾಗೂ ಮಹಿಳಾ ಸಿಬ್ಬಂದಿಯೋರ್ವರು ನಗರದ ನ್ಯೂಚಿತ್ರ ಸರ್ಕಲ್‌ ಬಳಿ ಕರ್ತವ್ಯದಲ್ಲಿದ್ದ ವೇಳೆ ಇಬ್ಬರು ಬೈಕ್‌ ನಲ್ಲಿ ಬಂದು, ಇದರ ಪೈಕಿ ಓರ್ವ ಬೈಕ್‌ ನಿಂದ ಇಳಿದು ಪೊಲೀಸರು ಕೂತಲ್ಲಿಗೆ ಹೋಗಿ ಗಣೇಶ್ ಕಾಮತ್‌ಗೆ ತಲವಾರಿನಿಂದ ದಾಳಿ ನಡೆಸಿ ಬೈಕ್‌ ಏರಿ ಪರಾರಿಯಾಗಿದ್ದರು. ಮಂಗಳೂರು ಗೋಲಿಬಾರ್‌ ಗೆ ರಿವೇಂಜ್‌ ಎಂದು ತಿಳಿದು ಬಂದಿದ್ದು, ಈ ಸಂಬಂಧ 8 ಮಂದಿಯನ್ನು ಬಂಧಿಸಲಾಗಿದೆ. 16 ವರ್ಷದ ಬಾಲಕ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ.

Also Read  ?ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಪ್ರಕರಣ ➤ ಆರೋಪಿ ಅರೆಸ್ಟ್

 

error: Content is protected !!
Scroll to Top