ತೊಕ್ಕೊಟ್ಟು: ಟಿಪ್ಪರ್ ಲಾರಿ ಹಾಗೂ ಓಮ್ನಿ ಕಾರು ನಡುವೆ ಭೀಕರ ಅಪಘಾತ ➤ ಇಬ್ಬರಿಗೆ ಗಂಭೀರ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜ. 19. ಟಿಪ್ಪರ್ ಲಾರಿ ಹಾಗೂ ಓಮ್ನಿ ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಓಮ್ನಿ ಕಾರಿನಲ್ಲಿದ್ದ ಪ್ರಯಾಣಿಕರಿಬ್ಬರು ಗಂಭೀರ ಗಾಯಗೊಂಡ ಘಟನೆ ಇಲ್ಲಿನ ಕಿನ್ಯದಲ್ಲಿ ನಡೆದಿದೆ.‌


ಗಾಯಗೊಂಡವರನ್ನು ಕೆ.ಸಿ. ನಗರದ ಪೂಮಣ್ಣು ನಿವಾಸಿಗಳಾದ ಇಮ್ರಾನ್ ( 23) ಮತ್ತು ನೂರುದ್ದೀನ್(22) ಎಂದು ಗುರುತಿಸಲಾಗಿದೆ. ಕೇರಳ ನೋಂದಣಿಯ ಟಿಪ್ಪರ್ ಲಾರಿ ಮರಳನ್ನು ಹೊತ್ತುಕೊಂಡು ದೇರಳಕಟ್ಟೆಗೆ ತೆರಳುತ್ತಿದ್ದ ವೇಳೆ ನಾಟೆಕಲ್ ನಿಂದ ಕೆ.ಸಿ. ರೋಡ್ ಕಡೆಗೆ ಬರುತ್ತಿದ್ದ ಓಮ್ನಿ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಓಮ್ನಿ ಚಾಲಕನ ಕಾಲು ಮುರಿತಕ್ಕೊಳಗಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪ್ರದೇಶದಲ್ಲಿ ನಿತ್ಯವೂ ರಾತ್ರಿ ಹಗಲೆನ್ನದೆ ಅಕ್ರಮ ಮರಳು ಸಾಗಾಟ ನಡೆಯುತ್ತಿದ್ದು, ಈ ಬಗ್ಗೆ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Also Read  ಮಂಗಳೂರು: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

error: Content is protected !!
Scroll to Top