ಪಡಿತರ ಚೀಟಿದಾರರು ದಾಖಲೆ ವಿವರಗಳನ್ನು ನೀಡಲು ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 19.  ಸರಕಾರದ ಸೂಚನೆಯಂತೆ ಮೊದಲ ಹಂತದಲ್ಲಿ ಇ-ಕೆ.ವೈಸಿ ಮಾಡಲಾದ ಪಡಿತರ ಚೀಟಿ ಫಲಾನುಭವಿಗಳನ್ನು ಹೊರತು ಪಡಿಸಿ ಉಳಿದಿರುವ ಫಲಾನುಭವಿಗಳ ಇ-ಕೆ.ವೈಸಿ ನ್ಯಾಯಬೆಲೆ ಅಂಗಡಿಗಳ ಮೂಲಕ ಮರು ಪ್ರಾರಂಭಿಸಲು ಆದೇಶವಾಗಿರುತ್ತದೆ.


ಪಡಿತರ ಚೀಟಿದಾರರು ತಮ್ಮ ಕುಟುಂಬದ  ಎಲ್ಲಾ ಸದಸ್ಯರ  ಇ-ಕೆ.ವೈಸಿ  ನೀಡಬೇಕಾಗಿದ್ದು, ಪಡಿತರ  ಚೀಟಿಗಳಲ್ಲಿನ ಕುಟುಂಬದ ಮುಖ್ಯಸ್ಥ, ಸಂಬಂಧ, ಲಿಂಗ, ಜಾತಿ, ಎಲ್.ಪಿ.ಜಿ. ವಿವರ, ಮೊಬೈಲ್ ಸಂಖ್ಯೆ ತುರ್ತಾಗಿ ಸಂಗ್ರಹಿಸಬೇಕಾಗಿರುತ್ತದೆ. ಆದುದರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಚಾಲ್ತಿ ಇರುವ  ಅಂತ್ಯೋದಯ ಹಾಗೂ ಆದ್ಯತಾ ಪಡಿತರ ಚೀಟಿಗಳ ಇ-ಕೆ.ವೈಸಿ ನೀಡಲು ಆಧಾರ್ ಕಾರ್ಡ್, ಎಲ್.ಪಿ.ಜಿ ದಾಖಲೆ, ಜಾತಿ ಪ್ರಮಾಣ ಪತ್ರ(ಇದ್ದಲ್ಲಿ), ಆದಾಯ  ಪ್ರಮಾಣ  ಪತ್ರ ಮುಂತಾದ ದಾಖಲೆಗಳೊಂದಿಗೆ ತಮಗೆ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗೆ ತೆರಳಿ ಇ-ಕೆ.ವೈಸಿ ಮಾಡಿಸಿಕೊಳ್ಳಬೇಕು.  2020ರ ಫೆಬ್ರವರಿ ನಂತರ ವಿತರಿಸಿರುವ ಹೊಸ ಹಾಗೂ ಜಿ.ಎಸ್.ಸಿ(ತಿದ್ದುಪಡಿ) ಮಾಡಲಾದ ಪಡಿತರ ಚೀಟಿಗಳನ್ನು ಬಿಟ್ಟು ಮೊದಲ ಹಂತದಲ್ಲಿ ಇ-ಕೆ.ವೈಸಿ ಮಾಡದಿರುವ ಅಂತ್ಯೋದಯ ಹಾಗೂ ಆದ್ಯತಾ(ಬಿಪಿಎಲ್) ಪಡಿತರ ಚೀಟಿಗಳಿಗೆ ಇ-ಕೆ.ವೈಸಿ ಮಾಡಲೇ ಬೇಕಾಗಿರುತ್ತದೆ. ಇ-ಕೆ.ವೈಸಿ  ನೀಡಲು ಯಾವುದೇ ಶುಲ್ಕವಿರುವುದಿಲ್ಲ. ಇದನ್ನು ಉಚಿತವಾಗಿ ಮಾಡಲು ಕ್ರಮ ವಹಿಸಲಾಗಿದ್ದು ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರು ಸಹಕರಿಸಬೇಕು. ಹೆಚ್ಚಿನ ಮಾಹಿತಿಗಾಗಿ ಅಥವಾ ಇ-ಕೆ.ವೈಸಿ  ಸಂಗ್ರಹಣೆಗೆ ಯಾರಾದರೂ ಹಣ ಕೇಳಿದಲ್ಲಿ, ಏನಾದರೂ ದೂರುಗಳಿದ್ದರೆ  ಸಂಬಂಧಪಟ್ಟ ತಾಲ್ಲೂಕು ತಹಶೀಲ್ದಾರರು ಮತ್ತು ಸಹಾಯಕ ನಿರ್ದೇಶಕರು ಅನೌಪಚಾರಿಕ ಪಡಿತರ ಪ್ರದೇಶ ಮಂಗಳೂರು ಇವರ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಕೇಂದ್ರ ಸಹಕಾರ ಸಗಟು ಮಾರಾಟ ಸಂಘ ಮಹಾಸಭೆ- ಶೇ.10 ಡಿವಿಡೆಂಡ್ ಘೋಷಣೆ

error: Content is protected !!
Scroll to Top