ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿ ➤ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 19. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಮಹಿಳಾ ಉದ್ಧೇಶಿತ ಆಯವ್ಯಯದಡಿ ಪತ್ರಿಕೋದ್ಯಮ ಪದವಿ/ಸ್ನಾತಕೋತ್ತರ ಪದವೀಧರ ಮಹಿಳೆಯರು ವೃತ್ತಿಯಲ್ಲಿ ತೊಡಗಿಕೊಳ್ಳಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಅಪ್ರೆಂಟಿಸ್ ತರಬೇತಿಯನ್ನು ಹಮ್ಮಿಕೊಂಡಿದೆ.


ಅಭ್ಯರ್ಥಿಗಳು ಪತ್ರಿಕೋದ್ಯಮದಲ್ಲಿ ಪದವಿ/ಸ್ನಾತಕೋತ್ತರ ಪದವಿ ಪಡೆದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿದ್ದು, ಕನ್ನಡ ಭಾಷೆಯ ಬಳಕೆಯಲ್ಲಿ ಪ್ರಬುದ್ಧತೆ ಇರಬೇಕು. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದಂದು ಅಭ್ಯರ್ಥಿಗಳ ವಯಸ್ಸು 40 ವರ್ಷದೊಳಗಿರಬೇಕು. ಅರ್ಜಿಯೊಂದಿಗೆ ಎಸ್ಸೆಸ್ಸೆಲ್ಸಿ ಅಂಕಪಟ್ಟಿ, ಪದವಿ ಪ್ರಮಾಣ ಪತ್ರ, ಸ್ನಾತಕೋತ್ತರ ಪದವಿ ಪ್ರಮಾಣಪತ್ರ, ಪಾಸ್ ಪೋರ್ಟ್ ಅಳತೆಯ ಎರಡು ಭಾವಚಿತ್ರ ಹಾಗೂ ಇನ್ನಿತರ ಪೂರಕ ದಾಖಲೆಗಳನ್ನು ದ್ವಿ-ಪ್ರತಿಯಲ್ಲಿ ಸಲ್ಲಿಸಲು ಜನವರಿ 27 ಕೊನೆಯ ದಿನಾಂಕವಾಗಿರುತ್ತದೆ.   ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, 2ನೇ ಮಹಡಿ, ಪಿಡಬ್ಲ್ಯೂಡಿ ಕಟ್ಟಡ, ಮಂಗಳೂರು-575001 ಅಥವಾ ದೂ.ಸಂಖ್ಯೆ: 0824-2424254 ಸಂಪರ್ಕಿಸಬಹುದು ಎಂದು ಜಿಲ್ಲಾ ವಾರ್ತಾಧಿಕಾರಿ ಬಿ. ಮಂಜುನಾಥ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಬೆಳ್ತಂಗಡಿ: ಆಯುಧ ಪೂಜೆ ವೇಳೆ ಹೃದಯಾಘಾತದಿಂದ ಯುವಕ ಮೃತ್ಯು

error: Content is protected !!
Scroll to Top