ಸರಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 19.  ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ(ರಿ) ದ.ಕ ಜಿಲ್ಲಾ  ಶಾಖೆ ಇದರ ವತಿಯಿಂದ ಸರಕಾರಿ ನೌಕರರ ಮಕ್ಕಳಿಗೆ 2018-19 ಮತ್ತು 2019-20ನೇ ಸಾಲಿನ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ವಾರ್ಷಿಕ  ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಉತ್ತೀರ್ಣರಾದವರನ್ನು ಗಳಿಸಿದ ಅಂಕಗಳ ಆಧಾರಲ್ಲಿ ಪ್ರತಿಭಾ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗುತ್ತದೆ.


ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ(ರಿ) ದ.ಕ ಜಿಲ್ಲಾ  ಶಾಖೆ, ಕ್ಲಾಕ್ ಟವರ್ ಹತ್ತಿರ, ಹಂಪನಕಟ್ಟಾ, ಮಂಗಳೂರು ಇವರನ್ನು ಸಂಪರ್ಕಿಸುವಂತೆ ನೌಕರರ ಸಂಘದ ಅಧ್ಯಕ್ಷ ಪಿ.ಕೆ ಕೃಷ್ಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಇಂದು ಕೂಡ ಚಿನ್ನದ ದರದಲ್ಲಿ ಭಾರೀ ಏರಿಕೆ

error: Content is protected !!
Scroll to Top