(ನ್ಯೂಸ್ ಕಡಬ) newskadaba.com ಮಂಗಳೂರು, ಜ. 19. ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ. ಎಸ್. ಈಶ್ವರಪ್ಪ ರವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನವರಿ 29 ರಿಂದ 30 ರವರೆಗೆ ಪ್ರವಾಸ ಕೈಗೊಂಡಿದ್ದಾರೆ.
ಜನವರಿ 29 ರಂದು ರಾತ್ರಿ 7 ಕ್ಕೆ ಬೆಂಗಳೂರಿನಿಂದ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ.
ಜನವರಿ 30 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಾರ್ಯಕ್ರಮ ಮತ್ತು ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 2.30 ಕ್ಕೆ ಉಡುಪಿಗೆ ಪ್ರಯಾಣಿಸಲಿದ್ದಾರೆ.