ವಿಹಿಂಪ ಕಾರ್ಯದರ್ಶಿ ಶರಣ್ ಪಂಪ್ ವೆಲ್ ವಿರುದ್ದ ಸುಳ್ಳಾರೋಪ ➤ ಕಿಡಿಗೇಡಿಗಳ ವಿರುದ್ದ ಕ್ರಮಕೈಗೊಳ್ಳುವಂತೆ ಮನವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 20. ಇತ್ತೀಚಿನ ದಿನಗಳಲ್ಲಿ ಅಂತರ್ಜಾಲದ ಮುಖಾಂತರ ಇಲ್ಲಸಲ್ಲದ ವಿಷಯಗಳನ್ನು ಸೇರಿಸಿ ವಿಹಿಂಪ ವಿಭಾಗ ಕಾರ್ಯದರ್ಶಿ ಶರಣ್ ಪಂಪವೆಲ್ ಮೇಲೆ ಆರೋಪಗಳನ್ನು ಹೊರಿಸಿ ಸುಳ್ಳು ಪ್ರಚಾರ ಮಾಡಲಾಗುತ್ತಿದೆ.


ಇದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ವಿಷಯ ಬಹಳ ಬೇಸರದ ಸಂಗತಿಯಾಗಿದ್ದು, ಇದರ ಹಿಂದಿರುವ ಕಿಡಿಕೇಡಿಗಳನ್ನು ಪತ್ತೆಹಚ್ಚಿ ತಕ್ಷಣವೇ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಇಂತಹ ವಿಷಯ ಇನ್ನು ನಡೆಯದಂತೆ ನೋಡಿಕೊಳ್ಳಬೇಕು ಎಂದು ವಿಶ್ವ ಹಿಂದೂ ಪರಿಷತ್ ಮಂಗಳೂರು ವತಿಯಿಂದ ಸಹಾಯಕ ಪೊಲೀಸ್ ಆಯುಕ್ತರಿಗೆ ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ ವಿಭಾಗ ಬಜರಂಗದಳ ಸಂಚಾಲಕ್ ಭುಜಂಗ ಕುಲಾಲ್, ಜಿಲ್ಲಾಧ್ಯಕ್ಷರು ಗೋಪಾಲ್ ಕುತ್ತಾರ್, ಜಿಲ್ಲಾ ಕಾರ್ಯದರ್ಶಿ ಶಿವಾನಂದ್ ಮೆಂಡನ್, ಜಿಲ್ಲಾ ಉಪಾಧ್ಯಕ್ಷರು ಮನೋಹರ್ ಸುವರ್ಣ, ಜಿಲ್ಲಾ ಸಂಚಾಲಕ್ ಪುನೀತ್ ಅತ್ತಾವರ, ಜಿಲ್ಲಾ ಗೋರಕ್ಷಾ ಪ್ರಮುಖ್ ಪ್ರದೀಪ್ ಪಂಪವೆಲ್ ಈ ಉಪಸ್ಥಿತರಿದ್ದರು.

Also Read  ದಿನಗೂಲಿ ಆಧಾರದಲ್ಲಿ ಭಿಕ್ಷಾಟನೆ ➤ 55ಕ್ಕೂ ಅಧಿಕ ಆರೋಪಿಗಳು ವಶಕ್ಕೆ

error: Content is protected !!
Scroll to Top