(ನ್ಯೂಸ್ ಕಡಬ) newskadaba.com ಮಂಗಳೂರು, ಜ. 20. ಕರ್ನಾಟಕ ನೃತ್ಯ ಅಕಾಡೆಮಿಯು ಪ್ರಸ್ತುತ ಸಾಲಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಗುರು ಶಿಷ್ಯ ಪರಂಪರೆ ಯೋಜನೆಯಡಿ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಅಕಾಡೆಮಿ ವ್ಯಾಪ್ತಿಗೆ ಒಳಪಡುವ ಕರ್ನಾಟಕ ಸಂಗೀತ, ಹಿಂದೂಸ್ಥಾನಿ ಸಂಗೀತ, ಸುಗಮ ಸಂಗೀತ, ನೃತ್ಯ, ಕಥಾಕೀರ್ತನ ಮತ್ತು ಗಮಕ ಕಲಾಪ್ರಕಾರಗಳಲ್ಲಿ ಕಲಿಯಲು ಆಸಕ್ತಿಯುಳ್ಳ/ ಅಭ್ಯಾಸ ಮಾಡಲಿಚ್ಚಿಸುವ ವಿದ್ಯಾರ್ಥಿಗಳಿಂದ 3 ತಿಂಗಳುಗಳ ತರಬೇತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಜನವರಿ 30 ಕೊನೆಯ ದಿನ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿwUÁV https//karnatakasangeetanrityaacademy.com ಹಾಗೂ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಪಿ.ರಸ್ತೆ, ಬೆಂಗಳೂರು-2 ಕಚೇರಿಯ ದೂ.ಸಂ. 080-22215072 ನ್ನು ಸಂಪರ್ಕಿಸಬುಹುದು ಎಂದು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.