ಸುಳ್ಯ: ಅಕ್ರಮ ಮರ ಸಾಗಾಟ ➤ ಗ್ರಾ.ಪಂ. ಸದಸ್ಯ ಸಹಿತ ಮೂವರ ಬಂಧನ

(ನ್ಯೂಸ್ ಕಡಬ) newskadaba.com ಸುಳ್ಯ, ಜ. 20. ಅಕ್ರಮ ಮರ ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಾಚರಣೆಗಿಳಿದ ಪಂಜ ವಲಯ ಅರಣ್ಯಾಧಿಕಾರಿಗಳು ಜಾಲ್ಸೂರು ಗ್ರಾ.ಪಂ. ಸದಸ್ಯ ಸೇರಿದಂತೆ ಮೂವರನ್ನು ಪಂಜ ಅರಣ್ಯಾಧಿಕಾರಿಗಳು ವಶಕ್ಕೆ ಪಡೆದ ಘಟನೆ ನಡೆದಿದೆ.

ಬಂಧಿತ ಆರೋಪಿಗಳನ್ನು ಜಾಲ್ಸೂರು ಗ್ರಾ.ಪಂ. ಸದಸ್ಯ ಅಬ್ದುಲ್ ಮಜೀದ್ ನಡುವಡ್ಕ, ಮಹಮ್ಮದ್ ಸೋಯಾಬ್ ದೇಲಂಪಾಡಿ, ಅಭಿಲಾಷ್ ಗೌಡ ಅರಕಲಗೂಡು ಎಂದು ಗುರುತಿಸಲಾಗಿದೆ. ಇಲ್ಲಿನ ಅಮರಮುಡ್ನೂರು ಗ್ರಾಮದ ದೊಡ್ಡಿಹಿತ್ಲು ಎಂಬಲ್ಲಿ ಮಂಗಳವಾರದಂದು ಸರಕಾರಿ ಸ್ಥಳದಲ್ಲಿ ಅಕ್ರಮವಾಗಿ ಕಿರಾಲ್‌ ಬೋಗಿ ಮರಗಳನ್ನು ಕಡಿದು ದಿಮ್ಮಿಗಳನ್ನಾಗಿ ಮಾಡಿ ಸಾಗಾಟ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ವಶಪಡಿಸಿದ ಸೊತ್ತುಗಳ ಒಟ್ಟು ಮೌಲ್ಯ 15 ಲಕ್ಷ ಎಂದು ಅಂದಾಜಿಸಲಾಗಿದೆ. ಮಂಗಳೂರು ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ನಿರ್ದೇಶನದಂತೆ ಸುಬ್ರಹ್ಮಣ್ಯ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಆಸ್ಟಿನ್ ಪಿ ಸೋನ್ಸ್ ಅವರ ಮಾರ್ಗದರ್ಶನದಲ್ಲಿ ಪಂಜ ವಲಯ ಅರಣ್ಯಾಧಿಕಾರಿ ಮಂಜುನಾಥ ಎನ್. ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

Also Read  ಹೃದಯಾಘಾತ- ಕಾವೂರು ಹೆಡ್ ಕಾನ್ಸ್ಟೇಬಲ್ ನಿಧನ

error: Content is protected !!
Scroll to Top