ಪ್ರತೀ ತಾಲೂಕಿನಲ್ಲಿ ಗೋಶಾಲೆ ತೆರೆಯುವಂತೆ ಕ್ರಮ ➤ ಸಚಿವ ಪ್ರಭು ವಿ. ಚೌಹ್ಹಾನ್

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 20. ಪ್ರತೀ ತಾಲೂಕಿನಲ್ಲಿ ಸರಕಾರಿ ಗೋಶಾಲೆ ತೆರೆಯುವಂತೆ ಹಾಗೂ ಗೋರಕ್ಷಕರ ಮೇಲೆ ದಾಖಲಾದ ಪ್ರಕರಣವನ್ನು ಹಿಂಪಡೆಯುವಂತೆ ಕ್ರಮ ಕೈಗೊಳ್ಳುವುದಾಗಿ ರಾಜ್ಯ ಪಶು ಸಂಗೋಪನಾ ಸಚಿವ ಪ್ರಭು ವಿ ಚೌಹ್ಹಾನ್ ತಿಳಿಸಿದ್ದಾರೆ.

ಗೋ ರಕ್ಷಕರು ಗೋ ಸಾಗಾಟಗಾರರನ್ನು ತಡೆದ ಸಂದರ್ಭ ಇವರ ಮೇಲೆ ಹಲವು ಪ್ರಕರಣಗಳು ದಾಖಲಾಗಿದ್ದವು. ಅವುಗಳನ್ನು ಹಿಂದಕ್ಕೆ ಪಡೆಯುವಂತೆ ಸಾಕಷ್ಟು ಮನವಿಗಳು ಬಂದಿದೆ. ಈ ಕುರಿತು ಮುಖ್ಯಮಂತ್ರಿಗಳ ಜೊತೆ ಸಮಾಲೋಚಿಸಿ ಪ್ರಕರಣಗಳನ್ನು ಹಿಂದಕ್ಕೆ ಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಈ ಸಂದರ್ಭ ಶಾಸಕರಾದ ವೇದ ವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Also Read   ಬೆಳ್ತಂಗಡಿ: ಮನೆ ಅಂಗಳದಲ್ಲೇ ನಿವೃತ್ತ ಶಿಕ್ಷಕನ ಬರ್ಬರ ಕೊಲೆ..!

error: Content is protected !!
Scroll to Top