ಮಂಜೇಶ್ವರ: ಕಾರ್ಮಿಕನ ಮೃತದೇಹ ಬಾವಿಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಮಂಜೇಶ್ವರ, ಜ. 20. ಉತ್ತರಪ್ರದೇಶ ಮೂಲದ ಕಾರ್ಮಿಕನೋರ್ವನ ಮೃತದೇಹವೊಂದು ಮಂಜೇಶ್ವರ ಠಾಣಾ ವ್ಯಾಪ್ತಿಯ ಕುಂಜತ್ತೂರು ಎಂಬಲ್ಲಿ ಕೆರೆಯಲ್ಲಿ ಪತ್ತೆಯಾಗಿದೆ.

ಮೃತರನ್ನು ಅನಿಲ್ ಕುಮಾರ್ ಎಂದು ಗುರುತಿಸಲಾಗಿದೆ‌. ವಿದ್ಯುತ್ ಕಂಬ ತಯಾರಿಕಾ ಘಟಕದಲ್ಲಿ ಕಾರ್ಮಿಕನಾಗಿ ದುಡಿಯುತ್ತಿದ್ದ ಇವರು ಎರಡು ದಿನಗಳಿಂದ ನಾಪತ್ತೆಯಾಗಿದ್ದರು. ಇವರ ಮೃತದೇಹವು ಕುಂಜತ್ತೂರಿನ ಅಂಬಿತ್ತಡಿ ಎಂಬಲ್ಲಿ ಖಾಸಗಿ ವ್ಯಕ್ತಿಯೋರ್ವರ ಕೆರೆಯಲ್ಲಿ ಪತ್ತೆಯಾಗಿತ್ತು. ಇವರ ತಲೆಯಲ್ಲಿ ಗಾಯಗಳಿದ್ದು, ಮರಣೋತ್ತರ ಪರೀಕ್ಷೆಯ ಬಳಿಕ ನೈಜ ಕಾರಣ ತಿಳಿದುಬರಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Also Read  ಶಕ್ತಿ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆ

error: Content is protected !!
Scroll to Top