ಮಂಜೇಶ್ವರ: ಗಾಂಜಾ ಹಾಗೂ ಚಿನ್ನಾಭರಣ ಸೇರಿದಂತೆ ಹಲವು ಪ್ರಕರಣಗಳ ಆರೋಪಿ ಬಂಧನ

(ನ್ಯೂಸ್ ಕಡಬ) newskadaba.com ಮಂಜೇಶ್ವರ, ಜ. 20. ಗಾಂಜಾ ಹಾಗೂ ಚಿನ್ನಾಭರಣ ಕಳ್ಳತನ ಸೇರಿದಂತೆ ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಹೊಸಂಗಡಿ ರಾಮಂತಳಿಯ ಆಬಿದ್ (22) ಎಂದು ಗುರುತಿಸಲಾಗಿದೆ. ಈತ 2019ರಲ್ಲಿ ಚಿನ್ನಾಭರಣ ವಂಚನೆ ಹಾಗೂ 2020ರಲ್ಲಿ ಗಾಂಜಾ ಸಾಗಾಟ ಪ್ರಕರಣದ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

Scroll to Top