ಜಿಲ್ಲಾ ಮಟ್ಟದ ‘ಕೈಗಾರಿಕಾ ಸ್ಪಂದನ’ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 20. ಕೈಗಾರಿಕಾ ಪ್ರದೇಶಗಳಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳ ಹಾಗೂ ಉದ್ದಿಮೆದಾರರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಬಗ್ಗೆ ದ.ಕ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜನವರಿ ಅಂತ್ಯಕ್ಕೆ ಜಿಲ್ಲಾ ಮಟ್ಟದ ‘ಕೈಗಾರಿಕಾ ಸ್ಪಂದನ’ ಕಾರ್ಯಕ್ರಮ ನಡೆಯಲಿದೆ.


ಜಿಲ್ಲೆಯ ಕೈಗಾರಿಕೋದ್ಯಮಿಗಳು ತಮ್ಮ ಅಹವಾಲುಗಳು/ ಸಲಹೆಗಳು ಇದ್ದಲ್ಲಿ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಎಯ್ಯಾಡಿ, ಮಂಗಳೂರು ಇವರಿಗೆ ಜನವರಿ 27 ರೊಳಗೆ ಲಿಖಿತವಾಗಿ ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂ. ಸಂಖ್ಯೆ: 0824-2214021ನ್ನು ಸಂಪರ್ಕಿಸಬಹುದು ಎಂದು ಮಂಗಳೂರು ಜಿಲ್ಲಾಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಅಧಿಕಾರ ಹಂಚಿಕೆ ಸೂತ್ರಕ್ಕೆ ಒಪ್ಪಿದ ಸಿದ್ಧು, ಡಿಕೆಶಿ ➤ 30-30 ತಿಂಗಳು ಸಿಎಂ ಪಟ್ಟ

error: Content is protected !!
Scroll to Top