ಸುಬ್ರಹ್ಮಣ್ಯ: ಜ. 22 ರಂದು ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನವನ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 20. ಕರ್ನಾಟಕ ಸರ್ಕಾರ ಅರಣ್ಯ ಇಲಾಖೆ ವತಿಯಿಂದ ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನವನ ಉದ್ಘಾಟನಾ ಸಮಾರಂಭವನ್ನು ಸುಬ್ರಹ್ಮಣ್ಯದ ಕುಮಾರಧಾರದಲ್ಲಿ ಜನವರಿ 22ರಂದು ಮಧ್ಯಾಹ್ನ 3 ಗಂಟೆಗೆ ಆಯೋಜಿಸಲಾಗಿದೆ.


ಕಾರ್ಯಕ್ರಮವನ್ನು ಮೀನುಗಾರಿಕೆ, ಮುಜರಾಯಿ, ಬಂದರು ಮತ್ತು ಒಳನಾಡು ಜಲಸಾರಿಗೆ, ಕರ್ನಾಟಕ ಸರ್ಕಾರ ಹಾಗೂ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟನೆ ಮಾಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಚಿವ ಎಸ್.ಅಂಗಾರ ವಹಿಸಲಿದ್ದಾರೆ. ಅರಣ್ಯ ಸಚಿವರಾದ ಆನಂದ್ ಸಿಂಗ್, ಸಂಸದ ನಳಿನ್ ಕುಮಾರ್, ವಿಧಾನ ಪರಿಷತ್ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ ಗೌರವ ಉಪಸ್ಥಿತರಿರುವರು. ಮುಖ್ಯ ಅತಿಥಿಗಳಾಗಿ ಜಿಲ್ಲೆಯ ಅರಣ್ಯ ಇಲಾಖಾಧಿಕಾರಿಗಳು ಭಾಗವಹಿಸಲಿದ್ದಾರೆ.

Also Read  ಜ. 22 ರಂದು “ನಮ್ಮ ನಡಿಗೆ- ತ್ಯಾಜ್ಯ ಮುಕ್ತ ಕಡೆಗೆ” ವಿಶೇಷ ಆಂದೋಲನಕ್ಕೆ ಚಾಲನೆ

error: Content is protected !!
Scroll to Top