ಜ. 22 ರಂದು “ನಮ್ಮ ನಡಿಗೆ- ತ್ಯಾಜ್ಯ ಮುಕ್ತ ಕಡೆಗೆ” ವಿಶೇಷ ಆಂದೋಲನಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 20. ಗ್ರಾಮಿಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ಸ್ವಚ್ಚ ಭಾರತ್ ಮಿಷನ್”(ಗ್ರಾ) ಯೋಜನೆಯಡಿ ಪ್ರತಿಯೊಂದು ಗ್ರಾಮವನ್ನು ತ್ಯಾಜ್ಯ ಮುಕ್ತವನ್ನಾಗಿಸಲು “ನಮ್ಮ ನಡಿಗೆ-ತ್ಯಾಜ್ಯ ಮುಕ್ತ ಕಡೆಗೆ” ವಿಶೇಷ ಜಿಲ್ಲಾ ಆಂದೋಲನಕ್ಕೆ ಜನವರಿ 22 ರಂದು ಬೆಳಿಗ್ಗೆ 9.30 ಗಂಟೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮ ಪಂಚಾಯತ್ ಬಳಿ ಇರುವ ದ. ಕ. ಜಿ. ಪಂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಾಲನೆ ಸಿಗಲಿದೆ.


ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾದ  ಕೋಟ ಶ್ರೀನಿವಾಸ ಪೂಜಾರಿಯವರು “ನಮ್ಮ ನಡಿಗೆ-ತ್ಯಾಜ್ಯ ಮುಕ್ತ ಕಡೆಗೆ” ವಿಶೇಷ ಜಿಲ್ಲಾ ಆಂದೋಲನಕ್ಕೆ ಚಾಲನೆ ನೀಡಲಿದ್ದಾರೆ. ಸಂಸದ ನಳಿನ್ ಕುಮಾರ್ ಕಟೀಲ್ ಪ್ರಚಾರ ವಾಹನಕ್ಕೆ ಚಾಲನೆ ನೀಡಲಿದ್ದಾರೆ. ನೂತನ ಕಾಂಕ್ರೀಟಿಕರಣಗೊಂಡ ರಸ್ತೆಯನ್ನು ಸಚಿವರಾದ ಎಸ್. ಅಂಗಾರ ಉದ್ಘಾಟಿಸಲಿದ್ದಾರೆ. ಪೋಸ್ಟರ್‍ ನ್ನು ದ.ಕ. ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಮೀನಾಕ್ಷಿ ಶಾಂತಿಗೋಡು ಬಿಡುಗಡೆ ಮಾಡಲಿದ್ದಾರೆ. ಹಸಿ ಕಸ, ಒಣ ಕಸ ಸಂಗ್ರಹಣೆಯ ಬಕೆಟ್‍ ನ್ನು ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷರಾದ ಚಂದ್ರಹಾಸ ಕರ್ಕೇರಾ ವಿತರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುತ್ತೂರು ವಿಧಾನ ಸಭಾಕ್ಷೇತ್ರದ ಶಾಸಕ  ಸಂಜೀವ ಮಠಂದೂರು ವಹಿಸಲಿದ್ದಾರೆ.

error: Content is protected !!

Join the Group

Join WhatsApp Group