ನೂತನ ಸಚಿವರಿಗೆ ಖಾತೆ ಹಂಚಿಕೆ ➤ ಬಂದರು ಮತ್ತು ಮೀನುಗಾರಿಕಾ ಸಚಿವರಾಗಿ ಎಸ್.ಅಂಗಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 21. ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಸುಳ್ಯ ಶಾಸಕ ಎಸ್. ಅಂಗಾರ ಅವರಿಗೆ ಮಾನ್ಯ ಮುಖ್ಯಮಂತ್ರಿಯವರು ಖಾತೆ ಹಂಚಿಕೆ ಮಾಡಿದ್ದಾರೆ.


ನೂತನ ಸಚಿವರ ಖಾತೆ ಪಟ್ಟಿಯನ್ನು ರಾಜಭವನಕ್ಕೆ ಕಳುಹಿಸಿಕೊಡಲಾಗಿದ್ದು, ಅಂಗಾರ ಅವರಿಗೆ ಮೀನುಗಾರಿಕೆ ಮತ್ತು ಬಂದರು ಖಾತೆಯನ್ನು ನೀಡಲಾಗಿದೆ.

Scroll to Top