ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ➤ ಕೊನೆಗೂ ರಾಗಿಣಿ ದ್ವಿವೇದಿಗೆ ಜಾಮೀನು ಮಂಜೂರು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 21. ಡ್ರಗ್ಸ್ ಪ್ರಕರಣದಲ್ಲಿ ಭಾಗಿಯಾಗಿ ಜೈಲು ಸೇರಿದ್ದ ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿಗೆ ಸುಪ್ರೀಂ ಕೋರ್ಟ್ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ.

ಕಳೆದ ಸೆಪ್ಟೆಂಬರ್ ತಿಂಗಳಿನಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ರಾಗಿಣಿಗೆ ಕೊನೆಗೂ ಜಾಮೀನು ಸಿಕ್ಕಿದ್ದು, ಇಂದು ಅಥವಾ ನಾಳೆ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ. ಕಳೆದ ವಾರ ಹೈಕೋರ್ಟಿನಲ್ಲಿ ಜಾಮೀನು ಅರ್ಜಿ ವಿಚಾರಣೆಗೆ ಬಂದಿತ್ತಾದರೂ ಕೊನೆಕ್ಷಣದಲ್ಲಿ ಜಾಮೀನು ನೀಡಲು ಹೈಕೋರ್ಟ್ ನಿರಾಕರಣೆ ಮಾಡಿದ್ದರಿಂದ ರಾಗಿಣಿ ಪರ ವಕೀಲರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

Also Read  ವಿಮಾನದಲ್ಲಿ ಬೀಡಿ ಸೇದಲು ಮುಂದಾದ ಕೂಲಿ ಕಾರ್ಮಿಕ.!➤ಆರೋಪಿ ಅರೆಸ್ಟ್

error: Content is protected !!
Scroll to Top