ಬಂಟ್ವಾಳ: ಸ್ಕೂಟರ್ ಸ್ಕಿಡ್ ಆಗಿ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 21. ಚಾಲಕನ ನಿಯಂತ್ರಣ ತಪ್ಪಿದ ದ್ವಿಚಕ್ರ ವಾಹನವೊಂದು ಪಲ್ಟಿಯಾಗಿ ಸವಾರ ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ಬುಧವಾರ ರಾತ್ರಿ ವೇಳೆ ನಡೆದಿದೆ.

ಮೃತರನ್ನು ಮಂಗಳೂರು ಬೆಂಗ್ರೆ ನಿವಾಸಿ ಅಬ್ದುಲ್ ಅಜೀಜ್ (45) ಎಂದು ಗುರುತಿಸಲಾಗಿದೆ. ಇವರು ಸ್ಕೂಟರ್ ನಲ್ಲಿ ಮಂಗಳೂರಿನಿಂದ ಕಲ್ಲಡ್ಕಕ್ಕೆ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಸವಾರರನ್ನು ಸ್ಥಳೀಯರ ಸಹಕಾರದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಲಕಿದು ಬಂದಿದೆ.

Also Read  ಅನಿಲ ಸೋರಿಕೆ ➤ ನಾಲ್ವರಿಗೆ ಗಾಯ

error: Content is protected !!
Scroll to Top