(ನ್ಯೂಸ್ ಕಡಬ) newskadaba.com ಮೈಸೂರು, ಜ. 21. ಇನ್ನು ಮುಂದೆ ನಗರ ವ್ಯಾಪ್ತಿಯಲ್ಲಿ ಯಾವುದೇ ಪ್ಲೆಕ್ಸ್, ಬ್ಯಾನರ್ ಹಾಕಿದರೆ 10 ಸಾವಿರ ರೂ. ತನಕ ದಂಡ ವಿಧಿಸುವುದಾಗಿ ಮೈಸೂರು ಮಹಾನಗರ ಪಾಲಿಕೆ ಆದೇಶ ಹೊರಡಿಸಿದೆ.
ಮೈಸೂರು ನಗರದಲ್ಲಿ ಬ್ಯಾನರ್, ಪ್ಲೆಕ್ಸ್ ಹಾಕದಂತೆ ಸಾಕಷ್ಟು ಜಾಗೃತಿ ಮೂಡಿಸಿದರಾದರೂ ಪ್ಲೆಕ್ಸ್ ಹಾಗೂ ಬ್ಯಾನರ್ ಗಳ ಆಟ ನಿಲ್ಲಲಿಲ್ಲ. ಹೀಗಾಗಿ ಮೈಸೂರು ಮಹಾನಗರ ಪಾಲಿಕೆ ಇನ್ಮುಂದೆ ಪ್ಲೆಕ್ಸ್, ಬ್ಯಾನರ್ ಅಳವಡಿಸಿದರೆ 10 ಸಾವಿರ ರೂ. ತನಕ ದಂಡ ಹಾಗೂ ಕ್ರಿಮಿನಲ್ ಮೊಕದಮ್ಮೆ ದಾಖಲಿಸಲಿದೆ. ಇನ್ನು ನ್ಯಾಯಾಲಯದಲ್ಲಿ ರುಜುವಾತಾದರೆ 6 ತಿಂಗಳು ಜೈಲು ಶಿಕ್ಷೆ ವಿಧಿಸಲಿದೆ ಎಂದು ಆದೇಶ ಹೊರಡಿಸಲಾಗಿದೆ.