ಜ್ಯೂಸ್ ನಲ್ಲಿ ಅಮಲು ಪದಾರ್ಥ ಸೇರಿಸಿ ಯುವತಿಯ ಅತ್ಯಾಚಾರ ➤ ಉಪ್ಪಿನಂಗಡಿಯ ಯುವಕನ ವಿರುದ್ದ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಕಾರ್ಕಳ, ಜ. 22. ಕಾಲೇಜು ವಿದ್ಯಾರ್ಥಿನಿಯೋರ್ವಳನ್ನು ಕಾರಿನಲ್ಲಿ ಕರೆದೊಯ್ದು ಅಮಲು ಪದಾರ್ಥ ನೀಡಿ ಅತ್ಯಾಚಾರವೆಸಗಿ ಜೀವ ಬೆದರಿಕೆ ಹಾಕಿದ ಘಟನೆ ಕಾರ್ಕಳದಲ್ಲಿ ನಡೆದಿದೆ.

ಆರೋಪಿಯನ್ನು ಉಪ್ಪಿನಂಗಡಿ ನಿವಾಸಿ ಪ್ರಾಣೇಶ್ ಎಂದು ಗುರುತಿಸಲಾಗಿದೆ. ಯುವತಿ ಕಾಲೇಜಿಗೆಂದು ತೆರಳಲು ಬಸ್ಸಿಗೆ ಕಾಯುತ್ತಿದ್ದ ವೇಳೆ ಆಕೆಯ ದೊಡ್ಡಪ್ಪನ ಪರಿಚಯದ ಪ್ರಾಣೇಶ್ ಎಂಬಾತ ಅದೇ ಮಾರ್ಗದಲ್ಲಿ ಕಾರಿನಲ್ಲಿ ಬಂದು ಡ್ರಾಪ್ ಕೊಡುವುದಾಗಿ ನಂಬಿಸಿ ಕರೆದುಕೊಂಡು ಹೋಗಿದ್ದಾನೆ. ಆಕೆ ಇಳಿಯಬೇಕಾಗಿದ್ದ ಸ್ಥಳ ತಲುಪಿದರೂ ಕಾರನ್ನು ನಿಲ್ಲಿಸದೆ ಉಪ್ಪಿನಂಗಡಿ ಕಡೆಗೆ ಕಾರನ್ನು ಚಲಾಯಿಸಿ, ಬಳಿಕ ಕಾರಿನಲ್ಲೇ ಅಮಲು ಬರುವ ಜ್ಯೂಸ್ ನೀಡಿ ಮನೆಯೊಂದಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ ಎನ್ನಲಾಗಿದೆ. ಬಳಿಕ ಅತ್ಯಾಚಾರದ ವಿಡಿಯೋ ತೆಗೆದು ಯಾರಿಗಾದರೂ ಹೇಳಿದ್ದಲ್ಲಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಯುವತಿ ದೂರು ನೀಡಿದ್ದಾಳೆ. ಆನಂತರ ಜನವರಿ 12 ರಂದು ಯುವತಿ ಕಾರ್ಕಳಕ್ಕೆ ಕಂಪ್ಯೂಟರ್ ಕ್ಲಾಸಿಗೆಂದು ತೆರಳಿದ ಈಕೆಯನ್ನು ಬೈಲೂರಿಗೆ ಕರೆಸಿ, ಗುಡ್ಡೆಯಂಗಡಿ ಎಂಬಲ್ಲಿ ಮತ್ತೊಮ್ಮೆ ಅತ್ಯಾಚಾರ ನಡೆಸಿರುತ್ತಾನೆ ಎಂದು ಆರೋಪಿಸಿದ್ದಾಳೆ. ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Also Read  ರೈತರಿಂದ ಆಕ್ಷೇಪಣೆಗಳಿಗೆ ಫಸಲ್ ಭಿಮಾ ಯೋಜನೆ

error: Content is protected !!
Scroll to Top