ರಿಕ್ಷಾ ಹಾಗೂ ಕಂಟೇನರ್ ನಡುವೆ ಢಿಕ್ಕಿ ➤ 7 ಮಂದಿ ಮೃತ್ಯು, 15ಕ್ಕೂ ಅಧಿಕ ಮಂದಿಗೆ ಗಾಯ



(ನ್ಯೂಸ್ ಕಡಬ) newskadaba.com ಹೈದ್ರಾಬಾದ್, ಜ. 22. ಆಟೋ ರಿಕ್ಷಾ ಹಾಗೂ ಕಂಟೇನರ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿ, 15ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ತೆಲಂಗಾಣದ ನಲ್ಗೊಂಡ ಜಿಲ್ಲೆಯ ಅಂಗಡಿಪೇಟ್ ಎಂಬಲ್ಲಿ ನಡೆದಿದೆ.






ಮೃತಪಟ್ಟವರನ್ನು ಆಟೋ ಚಾಲಕ ಮಲ್ಲೇಶ್, ಪೆದ್ದಮ್ಮ, ನೋಮಲ ಸೈದಮ್ಮ ಕೊಟ್ಟಂ, ಇದ್ದಮ್ಮ, ಮಲ್ಲಮ್ಮ ಹಾಗೂ ಅಂಜನಮ್ಮ ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ 13 ಮಂದಿಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ. ಮೃತಪಟ್ಟವರೆಲ್ಲರೂ ಕೂಲಿ ಕಾರ್ಮಿಕರಾಗಿದ್ದು, ಕೆಲಸ ಮುಗಿಸಿ ಒಂದೇ ಆಟೋದಲ್ಲಿ ಸುಮಾರು 20 ಮಂದಿ ಮನೆಗೆ ಪ್ರಯಾಣ ಮಾಡುತ್ತಿದ್ದರು. ಈ ವೇಳೆಯಲ್ಲಿ ವೇಗವಾಗಿ ಬರುತ್ತಿದ್ದ ಕಂಟೈನರ್ ಲಾರಿಯೊಂದು ಆಟೋಗೆ ಢಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ 7 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಘಟನೆಯ ಕುರಿತು ನಲ್ಗೊಂಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






error: Content is protected !!
Scroll to Top