ಮಂಗಳೂರು: ಗಾಂಜಾ ಮಾರಾಟಕ್ಕೆ ಯತ್ನ ➤ ನಾಲ್ವರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 22. ಭಾರೀ ಪ್ರಮಾಣದ ಗಾಂಜಾ ಮಾರಾಟಕ್ಕೆತ್ನಿಸುತ್ತಿದ್ದ ಎರಡು ತಂಡವನ್ನು ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಬಂಧಿತ ಆರೋಪಿಗಳನ್ನು ತೆಲಂಗಾಣ ಮೂಲದ ವಿಠಲ್ ಚೌಹಾನ್ ಹಾಗೂ ಬೀದರ್ ನಿವಾಸಿಗಳಾದ ಸಂಜೀವ ಕುಮಾರ್, ಕಲ್ಲಪ್ಪ ಎಂದು ಗುರುತಿಸಲಾಗಿದೆ. ಮಂಗಳೂರು ಹೊರವಲಯದ ದೇರಳಕಟ್ಟೆಯಿಂದ ಮುಡಿಪು ಕಡೆಗೆ ಗಾಂಜಾ ಸಾಗಾಟದ ಕುರಿತು ಖಚಿತ ಮಾಹಿತಿಯ ಪಡೆದ ಸಿಸಿಬಿ ತಂಡ ದಾಳಿ ನಡೆಸಿ, ಗಾಂಜಾ ಸಾಗಾಟಕ್ಕೆ ಬಳಕೆ ಮಾಡಿದ ಮಹಾರಾಷ್ಟ್ರ ನೋಂದಾಯಿತ ಕಾರು, 15 ಕೆ.ಜಿ. ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ಈ ಕುರಿತು ಕೊಣಾಜೆ ಪೊಲೀಸ್ ಠಾಣೆಯ ಪ್ರಕರಣ ದಾಖಲಾಗಿದೆ. ಇನ್ನು ಕುತ್ತಾರಿನ ದೆಕ್ಕಾಡು ಎಂಬಲ್ಲಿ ಆರೋಪಿಗಳು ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದರು. ಇದರ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ನರಿಂಗಾನದ ತೌಡುಗೋಳಿ ನಿವಾಸಿ ಅಬ್ದುಲ್ ಅಝೀಜ್ ಅಲಿಯಾಸ್ (40 ವರ್ಷ) ಹಾಗೂ ಹಫೀಝ್ (34 ವರ್ಷ) ಸೇರಿದಂತೆ ನಾಲ್ವರನ್ನು ಉಳ್ಳಾಲ ಪೊಲೀಸರಿಗೆ ಒಪ್ಪಿಸಲಾಗಿದೆ.

Also Read  ಜಮ್ಮು-ಕಾಶ್ಮೀರ: ಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ ಓರ್ವ ಉಗ್ರನ ಹತ್ಯೆ

 

error: Content is protected !!
Scroll to Top