ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ತಾಲೂಕು ಕೇಂದ್ರಗಳಿಗೆ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 23. ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ಉಪಾಧೀಕ್ಷಕರು ಕೆ.ಸಿ. ಪ್ರಕಾಶ್, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್.ಎಂ. ಮತ್ತು ಗುರುರಾಜ್ ರವರು ದ.ಕ. ಜಿಲ್ಲೆಯ ವಿವಿಧ ತಾಲೂಕು ಕೇಂದ್ರಗಳಿಗೆ ಜನವರಿ 28, 29 ಮತ್ತು 30 ರಂದು ಭೇಟಿ ನೀಡಿ ಜನಸಂಪರ್ಕ ಸಭೆ ನಡೆಸಲಿದ್ದಾರೆ.


ಜನವರಿ 28 ರಂದು ಬೆಳಿಗ್ಗೆ 11 ಗಂಟೆಗೆ ಸುಳ್ಯ ಸರ್ಕಾರಿ ನಿರೀಕ್ಷಣಾ ಮಂದಿರ, ಮಧ್ಯಾಹ್ನ 2.30 ಗಂಟೆಗೆ ಪುತ್ತೂರು ಸರ್ಕಾರಿ ನಿರೀಕ್ಷಣಾ ಮಂದಿರ, ಜನವರಿ 29 ರಂದು ಬೆಳಿಗ್ಗೆ 11 ಗಂಟೆಗೆ ಬೆಳ್ತಂಗಡಿ ಸರ್ಕಾರಿ ನಿರೀಕ್ಷಣಾ ಮಂದಿರ, ಮಧ್ಯಾಹ್ನ 2.30 ಗಂಟೆಗೆ ಬಂಟ್ವಾಳ ಸರ್ಕಾರಿ ನಿರೀಕ್ಷಣಾ ಮಂದಿರ ಹಾಗೂ ಜನವರಿ 30 ರಂದು ಬೆಳಿಗ್ಗೆ 11 ಗಂಟೆಗೆ ಮೂಡಬಿದ್ರೆ ಸರ್ಕಾರಿ ನಿರೀಕ್ಷಣಾ ಮಂದಿರಕ್ಕೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ಭ್ರಷ್ಟಾಚಾರ ನಿಯಂತ್ರಣಕ್ಕೆ ಸಂಬಂಧಿಸಿದ ಮಾಹಿತಿ ನೀಡಿ ನಂತರ ಭ್ರಷ್ಟಾಚಾರಕ್ಕೆ ಸಂಬಂಧಪಟ್ಟ ದೂರುಗಳನ್ನು ಸ್ವೀಕರಿಸಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0824-2483000 ನ್ನು ಸಂಪರ್ಕಿಸಬಹುದು ಎಂದು ಪೊಲೀಸ್ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಹೊನ್ನಾವರ ಗೋಹತ್ಯೆ ಪ್ರಕರಣ ಬಳಿಕ ಎಚ್ಚೆತ್ತ ಸರ್ಕಾರ: ಜಾನುವಾರು ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮಕ್ಕೆ ಮುಂದು, 6 ತಂಡಗಳ ರಚನೆ

 

error: Content is protected !!
Scroll to Top