ಜಾತಿ ನಿಂದನೆ ಆರೋಪ ➤ ‘ಝೀ ಕನ್ನಡ’ ಮುಖ್ಯಸ್ಥ ಸೇರಿ ಹಲವರ ವಿರುದ್ದ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 24. ಝೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ಕಾಮಿಡಿ ಕಿಲಾಡಿಗಳು’ ಕಾರ್ಯಕ್ರಮದಲ್ಲಿ ಜಾತಿ ನಿಂದನೆ ಮಾಡಿದ್ದಾರೆ ಎಂಬ ಆರೋಪದಡಿ ಝೀ ಕನ್ನಡ ವಾಹಿನಿ ಮುಖ್ಯಸ್ಥ ಸೇರಿದಂತೆ ಹಲವರ ವಿರುದ್ಧ ಅಶೋಕನಗರ ಠಾಣೆಯಲ್ಲಿ ಎಫ್‍.ಐ.ಆರ್ ದಾಖಲಿಸಲಾಗಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಈ ಪ್ರಕರಣ ದಾಖಲಾಗಿದೆ. ಈ ಪ್ರಕರಣದ ತನಿಖೆಯನ್ನು ಎಸಿಪಿಯವರು ನಡೆಸಲಿದ್ದು, ಅವರೇ ಆರೋಪಿಗಳಿಗೆ ನೋಟಿಸ್ ನೀಡಿ ವಿಚಾರಣೆಗೆ ಒಳಪಡಿಸಲಿದ್ದಾರೆ ಎಂದು ತಿಳಿದು ಬಂದಿದೆ.

Scroll to Top