ಕಾಸರಗೋಡು: ಹಾಡಹಗಲೇ ದುಷ್ಕರ್ಮಿಗಳಿಂದ ವ್ಯಕ್ತಿಯ ಕೊಲೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ. 24. ಹಾಡುಹಗಲೇ ವ್ಯಕ್ತಿಯೋರ್ವನನ್ನು ದುಷ್ಕರ್ಮಿಗಳ ಗುಂಪೊಂದು ಥಳಿಸಿ ಕೊಲೆಗೈದ ಘಟನೆ ಶನಿವಾರ ಮಧ್ಯಾಹ್ನ ಕಾಸರಗೋಡು ನಗರದಲ್ಲಿ ನಡೆದಿದೆ.

ಮೃತರನ್ನು ಚೆಮ್ನಾಡ್ ದೇಳಿಯ ಮುಹಮ್ಮದ್ ರಫೀಕ್ (48) ಎಂದು ಗುರುತಿಸಲಾಗಿದೆ. ಇವರು ಖಾಸಗಿ ಆಸ್ಪತ್ರೆಯೊಂದರ ಸಮೀಪದ ಮೆಡಿಕಲ್ ಸ್ಟೋರ್ ನಲ್ಲಿ ಔಷಧಿ ಖರೀದಿಸುತ್ತಿದ್ದ ಸಂದರ್ಭ ಅಲ್ಲಿಗೆ ಆಗಮಿಸಿದ ಗುಂಪೊಂದು ಹಲ್ಲೆ ನಡೆಸಿದ್ದು, ಗಂಭೀರ ಗಾಯಗೊಂಡ ರಫೀಕ್ ಆಸ್ಪತ್ರೆಗೆ ಕರೆದೊಯ್ದರೂ ಆಗಲೇ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಕಾಸರಗೋಡು ಡಿವೈ.ಎಸ್.ಪಿ. ಪಿ.ಬಾಲಕೃಷ್ಣನ್ ನಾಯರ್ ನೇತೃತ್ವದ ಪೊಲೀಸ್ ಭೇಟಿ ನೀಡಿದ್ದು, ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಅಕ್ರಮ ಚಟುವಟಿಕೆಗಳ ತಾಣವಾಯ್ತು ಬೆಂಗಳೂರಿನ ಹೃದಯ ಭಾಗದ ಸ್ಕೈವಾಕ್​​        ➤ ಕಾಂಡೋಮ್​ ಸೇರಿದಂತೆ ತರಹೇವಾರಿ ತ್ಯಾಜ್ಯ ಪತ್ತೆ

 

error: Content is protected !!
Scroll to Top