(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 25. ಸ್ವಾವಲಂಬಿ ಭಾರತ ಯೋಜನೆಯಡಿ ದೇಶದ ಪ್ಲಾಸ್ಟಿಕ್ ಕೈಗಾರಿಕೆಗಳಿಗೆ ಉತ್ತೇಜನ ನೀಡುವ ಉದ್ದೇಶದ ಸಲುವಾಗಿ ದೇಶದಲ್ಲಿ ಎರಡು ಪ್ಲಾಸ್ಟಿಕ್ ಪಾರ್ಕ್ ಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಶ್ರೀ ಡಿ.ವಿ ಸದಾನಂದ ಗೌಡ ಅವರು ತಿಳಿಸಿದ್ದಾರೆ.
ಆರು ತಿಂಗಳ ಒಳಗೆ ಅಂತಿಮ ಒಪ್ಪಿಗೆ ನೀಡಿ ಯೋಜನೆಯ ಆರಂಭಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು. ಇದೊಂದು ಪ್ಲಾಸ್ಟಿಕ್ ಸಂಬಂಧಿತ ಕೈಗಾರಿಕೆಗಳಿಗೆ ಸೀಮಿತವಾದ ಕೈಗಾರಿಕಾಭಿವೃದ್ಧಿ ಕೇಂದ್ರ. ಪ್ಲಾಸ್ಟಿಕ್ ಸಂಬಂಧಿತ ಕೈಗಾರಿಕೆಗಳ ಅಭಿವೃದ್ಧಿಗೆ ಬೇಕಾದ ಎಲ್ಲ ಆಧುನಿಕ ತಂತ್ರಜ್ಞಾನ ಸೌಕರ್ಯಗಳೂ ಇಲ್ಲಿರುತ್ತವೆ. ಇವು ಸಾಮಾನ್ಯ ಸೌಲಭ್ಯಗಳಾಗಿದ್ದು (common facilities). ಇಲ್ಲಿ ಸ್ಥಾಪಿತವಾಗುವ ಎಲ್ಲ ಕೈಗಾರಿಕಾ ಘಟಕಗಳೂ ಈ ಸೌಲಭ್ಯಗಳನ್ನು ಬಳಸಿಕೊಳ್ಳಬಹುದು ಎಂದರು.