ಜ.31 ರಂದು ಕಡಬದ ಕೊಂಬಾರಿನಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ ➤ ಪುತ್ತೂರು ಎಸಿ ಯತೀಶ್ ಉಳ್ಳಾಲ್ ಅಧ್ಯಕ್ಷತೆಯಲ್ಲಿ ಕಡಬದಲ್ಲಿ ಅಧಿಕಾರಿಗಳ ಪೂರ್ವಭಾವಿ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಜ.25. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ(ರಿ.) ಮಂಗಳೂರು, ಕಡಬ ತಾಲೂಕು ಪತ್ರಕರ್ತರ ಸಂಘ(ರಿ.) ಇದರ ಸಹಯೋಗದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ದಕ್ಷಿಣ ಕನ್ನಡ ಪೊಲೀಸ್ ಇಲಾಖೆ, ಕಡಬ ತಾಲೂಕು ಆಡಳಿತ, ಕಡಬ ತಾಲೂಕು ಪಂಚಾಯತ್, ಕೊಂಬಾರು ಗ್ರಾಮ ಪಂಚಾಯತ್ ಇವುಗಳ ಸಹಭಾಗಿತ್ವದಲ್ಲಿ ಜನವರಿ 31 ಭಾನುವಾರದಂದು ಕಡಬ ತಾಲೂಕಿನ ಕೊಂಬಾರಿನಲ್ಲಿ ನಡೆಯಲಿರುವ ಪತ್ರಕರ್ತರ ಗ್ರಾಮ ವಾಸ್ತವ್ಯ ಮತ್ತು ಜಾಗೃತಿ ಶಿಬಿರದ ಪೂರ್ವಭಾವಿಯಾಗಿ ಅಧಿಕಾರಿಗಳ ಸಭೆಯು ಕಡಬದ ಸಿ.ಎ.ಬ್ಯಾಂಕ್ ಸಭಾಂಗಣದಲ್ಲಿ ಸೋಮವಾರದಂದು ನಡೆಯಿತು.

Also Read  ಮಂಗಳೂರು: ಶ್ರೀದೇವಿ ಕಾಲೇಜ್ ಆಫ್ ನರ್ಸಿಂಗ್ ಗೆ ಹಲವು ರ್ಯಾಂಕ್ ಗಳು

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುತ್ತೂರು ಸಹಾಯಕ ಆಯುಕ್ತರಾದ ಯತೀಶ್ ಉಳ್ಳಾಲ್ ವಹಿಸಿದ್ದರು. ಸಭೆಯಲ್ಲಿ 33 ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದು, ಕಾರ್ಯಕ್ರಮ ನಡೆಸುವ ಬಗ್ಗೆ ರೂಪುರೇಷೆಗಳನ್ನು ತಯಾರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಹಾಗೂ ಕಡಬ ತಾಲೂಕು ಪತ್ರಕರ್ತರ ಸಂಘದ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.

error: Content is protected !!
Scroll to Top