ಬಿಗ್ ಬಾಸ್ ಖ್ಯಾತಿಯ ಜಯಶ್ರೀ ರಾಮಯ್ಯ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 25. ಇಲ್ಲಿನ ವೃದ್ಧಾಶ್ರಮದಲ್ಲಿದ್ದ ಬಿಗ್‌ ಬಾಸ್‌ ಖ್ಯಾತಿಯ ನಟಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.


ಆತ್ಮಹತ್ಯೆ ಮಾಡಿಕೊಂಡವರನ್ನು ಜಯಶ್ರೀ ರಾಮಯ್ಯ ಎಂದು ಗುರುತಿಸಲಾಗಿದೆ. ಇವರು ಮಾಗಡಿ ರಸ್ತೆಯ ಪ್ರಗತಿ ಲೇಔಟ್‌ ನಲ್ಲಿರುವ ಸಂಧ್ಯಾಕಿರಣ ಎಂಬ ವೃದ್ಧಾಶ್ರಮದಲ್ಲಿರುವ ಅಪಾರ್ಟ್ ಮೆಂಟ್ ನಲ್ಲಿ ವಾಸಿಸುತ್ತಿದ್ದು, ನಿನ್ನೆ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಮಾರನಾಯಕನ ಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Scroll to Top