ಕಡಬ ತಾಲೂಕಿನಲ್ಲಿ ಗೋಶಾಲೆ ನಿರ್ಮಿಸುವಂತೆ ವಿಹಿಂಪ ವತಿಯಿಂದ ಶಾಸಕ ಎಸ್.ಅಂಗಾರ ಅವರಿಗೆ ಮನವಿ

(ನ್ಯೂಸ್ ಕಡಬ) newskadaba.com ಕಡಬ, ಜ. 25. ತಾಲೂಕಿನಲ್ಲಿ ಗೋ ಶಾಲೆಯ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ಕಡಬ ವಿಹಿಂಪ ಭಜರಂಗದಳ ವತಿಯಿಂದ ಶಾಸಕ ಎಸ್. ಅಂಗಾರ ಅವರಿಗೆ ಮನವಿ ಸಲ್ಲಿಸಲಾಯಿತು.


ಇದೀಗ ಅಶಕ್ತ ಗೋವುಗಳನ್ನು ಸಂಘಟನೆಯ ವತಿಯಿಂದ ಹೊರಜಿಲ್ಲೆಯ ಗೋ ಶಾಲೆಗಳಿಗೆ ಸಾಗಿಸಲಾಗುತ್ತಿದ್ದು, ವಾಹನ ಬಾಡಿಗೆ ಮುಂತಾದವುಗಳಿಂದ ಭಾರೀ ಖರ್ಚು ಉಂಟಾಗುತ್ತದೆ. ಇದರಿಂದ ಬಹಳ ತೊಂದರೆಯಾಗುತ್ತಿದ್ದು, ಈ ಸಮಸ್ಯೆಗೆ ಪರಿಹಾರ ಸಿಗುವ ನಿಟ್ಟಿನಲ್ಲಿ ತಾಲೂಕಿನಲ್ಲಿ ಎಲ್ಲಿಯಾದರೂ ಸ್ಥಳಗಳನ್ನು ಗುರುತಿಸಿ ತಕ್ಷಣವೇ ಕಾರ್ಯಪ್ರವೃತ್ತರಾಗುವಂತೆ ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ. ಈ ಸಂದರ್ಭ ವಿಶ್ವ ಹಿಂದೂ ಪರಿಷದ್ ಕಡಬ ಪ್ರಖಂಡ ಅಧ್ಯಕ್ಷ ರಾಧಾಕೃಷ್ಣ ಕೋಲ್ಪೆ, ಕಾರ್ಯದರ್ಶಿ ಪ್ರಮೋದ್ ರೈ ನಂದುಗುರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Also Read  ಅಸಮರ್ಪಕ ಒಳಚರಂಡಿ ಕಾಮಗಾರಿ : ಉಸ್ತುವಾರಿ ಕಾರ್ಯದರ್ಶಿ ಅಸಮಾಧಾನ

error: Content is protected !!
Scroll to Top