ಕಡಬ: ತಹಶೀಲ್ದಾರ್ ಕಛೇರಿಯಲ್ಲಿ ಗಣರಾಜ್ಯೋತ್ಸವ ಆಚರಣೆ

(ನ್ಯೂಸ್ ಕಡಬ) newskadaba.com ಕಡಬ, ಜ.26. ಕಡಬ ತಹಶೀಲ್ದಾರ್ ಕಛೇರಿಯಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.

ಕಡಬ ತಹಶೀಲ್ದಾರ್ ಅನಂತ ಶಂಕರ್ ಧ್ವಜಾರೋಹಣ ನೆರವೇರಿಸಿದರು. ಸಭಾ ಕಾರ್ಯಕ್ರಮವನ್ನು ಕಡಬ ಜಿಲ್ಲಾ ಪಂಚಾಯತ್ ಸದಸ್ಯ ಪಿ.ಪಿ.ವರ್ಗೀಸ್ ಉದ್ಘಾಟಿಸಿದರು. ಸಭೆಯ ಅಧ್ಯಕ್ಷತೆಯನ್ನು ಕಡಬ ತಾಲೂಕು ಪಂಚಾಯತ್ ಅಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ ವಹಿಸಿ ಮಾತನಾಡಿದರು.

ಎ.ಪಿ.ಎಂ.ಸಿ.ಅಧ್ಯಕ್ಷ ದಿನೇಶ್ ಮೆದು, ನಿರ್ದೇಶಕಿ ಪುಲಸ್ತ್ಯಾ ರೈ, ಗ್ರಾಮಾಂತರ ಸರ್ಕಲ್ ಇನ್ಸ್ ಪೆಕ್ಟರ್ ಉಮೇಶ್ ಉಪ್ಪಳಿಕೆ, ಕಡಬ ತಹಸೀಲ್ದಾರ್ ಅನಂತ ಶಂಕರ್, ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷೆ ಪಿ.ವೈ.ಕುಸುಮಾ ಗಣರಾಜ್ಯೋತ್ಸವದ ಬಗ್ಗೆ ಮಾತನಾಡಿದರು. ಉಪ ತಹಸೀಲ್ದಾರ್ ಮನೋಹರ್ ಕೆ.ಟಿ. ಸ್ವಾಗತಿಸಿ, ತಾ.ಪಂ.ಯೋಜನಾಧಿಕಾರಿ ಚೆನ್ನಪ್ಪ ಗೌಡ ಕಜೆಮೂಲೆ ಅವರು ವಂದಿಸಿದರು. ಉಪನ್ಯಾಸಕ ಪ್ರಶಾಂತ್ ಕಾರ್ಯಕ್ರಮ ನಿರೂಪಿಸಿದರು.

Also Read  ಪಿಲಿಕುಳ ಜೈವಿಕ ಉದ್ಯಾನವನದ "ವಿಕ್ರಂ ಹುಲಿ" ಇನ್ನಿಲ್ಲ

error: Content is protected !!
Scroll to Top