ಕಡಬ ಕಾಲೇಜಿನ ಹಳೆ ವಿದ್ಯಾರ್ಥಿ ಈಗ ಬೆಂಗಳೂರಿನಲ್ಲಿ ಸಬ್ ಇನ್ಸ್‌ಪೆಕ್ಟರ್

(ನ್ಯೂಸ್ ಕಡಬ) newskadaba.com ಗುತ್ತಿಗಾರು, ಜ. 27. ಪಿ.ಎಸ್.ಐ ನೇರ ನೇಮಕಾತಿಯಲ್ಲಿ ಆಯ್ಕೆಗೊಂಡಿದ್ದ ಗುತ್ತಿಗಾರಿನ ಪ್ರದೀಪ್ ಗೌಡ ಕೊಲ್ಯ ಬೆಂಗಳೂರು ಜೆ.ಪಿ.ನಗರದ ಪುಟ್ಟೇನಹಳ್ಳಿ ಠಾಣೆಯಲ್ಲಿ ಎಸ್.ಐ ಆಗಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಇವರು ಗುತ್ತಿಗಾರಿನಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣವನ್ನು ಪಡೆದು, ಪಿಯುಸಿ ಶಿಕ್ಷಣವನ್ನು ಕಡಬ ಜೂನಿಯರ್ ಕಾಲೇಜಿನಲ್ಲಿ ಮುಗಿಸಿದ್ದು, ಪದವಿ ಶಿಕ್ಷಣವನ್ನು ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಪಡೆದಿದ್ದರು. ಇಂಗ್ಲಿಷ್‌ ನಲ್ಲಿ ಸ್ನಾತಕೋತ್ತರ ಪದವಿಯನ್ನು ಮೈಸೂರು ಮುಕ್ತ ವಿಶ್ವ ವಿದ್ಯಾನಿಲಯದಲ್ಲಿ ಪಡೆದಿದ್ದರು. 2008ರಲ್ಲಿ ಪೊಲೀಸ್ ಇಲಾಖೆಗೆ ಸೇರಿದ ಇವರು 2014ರ ವರೆಗೆ ಮಂಗಳೂರಿನ ಬಂದರು ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ, ಬಳಿಕ ಮಂಗಳೂರಿನ ಲೋಕಾಯುಕ್ತದಲ್ಲಿ ಸೇವೆ ಸಲ್ಲಿಸಿದ್ದರು. ಇವರು ನಾಲ್ಕೂರು ಗ್ರಾಮದ ದಿ.ಚಂದ್ರಶೇಖರ ಕೊಲ್ಯ ಹಾಗೂ ಶೋಭಾ ದಂಪತಿಯ ಪುತ್ರ.

Also Read  ಸುಳ್ಯ: ಸಾಮಾಜಿಕ ಧುರೀಣ ಟಿ.ಎಮ್.ಶಹೀದ್ ರವರ 50 ನೇ ಸುವರ್ಣ ಸಂಭ್ರಮ ಪ್ರಯುಕ್ತ ಧಾರ್ಮಿಕ ಕಾರ್ಯಕ್ರಮ

error: Content is protected !!
Scroll to Top