ಮಂಗಳೂರು: ಕಟ್ಟಡದಿಂದ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 27. ದೇರಳಕಟ್ಟೆ ಖಾಸಗಿ ಆಸ್ಪತ್ರೆಯ ಸಮೀಪದ ಕಟ್ಟಡವೊಂದರಿಂದ ಆಯತಪ್ಪಿ ಬಿದ್ದ ಸೆಕ್ಯುರಿಟಿ ಗಾರ್ಡ್ ಓರ್ವರು ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟವರನ್ನು ಕುತ್ತಾರಿನ‌ ಸತೀಶ್(38) ಎಂದು ಗುರುತಿಸಲಾಗಿದೆ. ಇವರು ಲಿಫ್ಟ್ ಚೆಕ್ ಮಾಡಲೆಂದು ತೆರಳಿದ್ದ ವೇಳೆ ಆಯತಪ್ಪಿ ಬಿದ್ದು ತಲೆಗೆ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top