ಮಂಗಳೂರು: ವಿ.ವಿ ಕಾಲೇಜಿನಲ್ಲಿ ಒಂದು ದಿನದ ಶ್ರಮದಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 28. ಗಣರಾಜ್ಯೋತ್ಸವ ದಿನಾಚರಣೆಯ ಪ್ರಯುಕ್ತ ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಯುವ ರೆಡ್ ಕ್ರಾಸ್ ಮತ್ತು ಮಾನವಿಕ ಸಂಘದ ಸದಸ್ಯರು ಜಂಟಿಯಾಗಿ ಮಂಗಳವಾರ ಕಾಲೇಜಿನಲ್ಲಿ ‘ಕ್ಯಾಂಪಸ್ ಕ್ಲೀನ್ ಡ್ರೈವ್ʼ ಹಮ್ಮಿಕೊಂಡಿದ್ದರು.

ಕೊರೋನಾ ಬಳಿಕ ಶಾಲೆಗಳು ಪುನರಾರಂಭಗೊಂಡಿದ್ದು, ವಿದ್ಯಾರ್ಥಿಗಳಲ್ಲಿ ಉತ್ಸಾಹ ಮೂಡಿಸುವ ಸಲುವಾಗಿ, ಜೊತೆಗೆ ಆರೋಗ್ಯಕರ ಪರಿಸರ ನಿರ್ಮಾಣಕ್ಕಾಗಿ ಒಂದು ದಿನದ ಶ್ರಮದಾನ ಹಮ್ಮಿಕೊಳ್ಳಲಾಗಿತ್ತು. ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ ಮತ್ತು ಮಾನವಿಕ ಸಂಘದ ಸಂಚಾಲಕರಾದ ಡಾ. ಕುಮಾರಸ್ವಾಮಿಯವರ ಮಾರ್ಗದರ್ಶನದಲ್ಲಿ ನಡೆದ ಶಿಬಿರದಲ್ಲಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಮಂಗಳೂರು ವಿಶ್ವವಿದ್ಯಾಲಯದ ಯೋಜನೆ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಮಂಡಳಿ ನಿರ್ದೇಶಕ ಪ್ರೊ. ಕೆ.ಎಸ್. ಜಯಪ್ಪ, ಕಾಲೇಜಿನ ಪ್ರಾಂಶುಪಾಲ ಡಾ. ಎ. ಹರೀಶ, ಮಂಗಳೂರು ವಿಶ್ವವಿದ್ಯಾನಿಲಯ ಯುವ ರೆಡ್ ಕ್ರಾಸ್ ನೋಡಲ್ ಅಧಿಕಾರಿ ಡಾ. ಗಣಪತಿ ಗೌಡ ಹಾಗೂ ಮತ್ತಿತರರು ಶಿಬಿರದಲ್ಲಿ ಉಪಸ್ಥಿತರಿದ್ದರು.

Also Read  ಇದೀಗ ಮತ್ತಷ್ಟು ಹೊಸತನದೊಂದಿಗೆ "ಟಿವಿಎಸ್ ಜುಪಿಟರ್"; ಕಡಬದ ಅಡಿಗ ಮೋಟಾರ್ಸ್ ನಲ್ಲಿ ಬಿಡುಗಡೆ

error: Content is protected !!
Scroll to Top